ಉಜ್ಜಯಿನಿ ಸಿದ್ದಲಿಂಗ ಜಗದ್ಗುರುಗಳ 88ನೇ ಪುಣ್ಯರಾಧನೆ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ ಫೆ 01 : ಇಲ್ಲಿನ ಬಸವೇಶ್ವರ ನಗರದ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ಇಂದು  ಉಜ್ಜಯಿನಿ ಸಿದ್ದಲಿಂಗ ಜಗದ್ಗುರುಗಳ 88ನೇ ಪುಣ್ಯರಾಧನೆ ಹಾಗೂ   ಮಾತೆ ಸಜ್ಜಲಗುಡ್ಡದ ಶರಣಮ್ಮ ಅವ್ವನವರ ಪುರಾಣ  ಮಂಗಳ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ  ಉಜ್ಜಯನಿ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಪಾಲ್ಗೊಂಡು ಆಶೀರ್ವಚನ ನೀಡಿದರು. ನಂತರ ಪ್ರಸಾದ ವಿತರಣೆ ನಡೆಯಿತು.