ಉಜ್ವಲ ಭಾರತ ಉಜ್ವಲ ಭವಿಷ್ಯಇಂಧನ @ 2047 ವಿದ್ಯುತ್ ಮಹೋತ್ಸವದ ಉದ್ಘಾಟನಾ ಸಮಾರಂಭ

ಕಲಬುರಗಿ,ಜು.26:ಉಜ್ವಲ ಭಾರತ ಉಜ್ವಲ ಭವಿಷ್ಯ ಇಂಧನ @ 2047 ವಿದ್ಯುತ್ ಮಹೋತ್ಸವದ ಉದ್ಘಾಟನಾ ಸಮಾರಂಭವನ್ನು ಜುಲೈ 27 ರಂದು ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಮಲಾಪುರ ಪಟ್ಟಣದ ಓಕಳಿ ರಸ್ತೆಯ ಆಕೃತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಮುರುಗೇಶ ಆರ್. ನಿರಾಣಿ ಅವರ ಘನ ಉಪಸ್ಥಿತಿಯಲ್ಲಿ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾದ ವಿ. ಸುನೀಲಕುಮಾರ್ ಅವರು ಸಮಾರಂಭವನ್ನು ಉದ್ಘಾಟಿಸುವರು. ಕಲಬುರಗಿ ಗ್ರ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹಾಗೂ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಡಾ. ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ ಖರ್ಬಿಕರ್, ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾ ಪಂತ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಡಿ.ಬದೋಲೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.