ಉಡುಪಿ ಜಿಲ್ಲಾಸ್ಪತ್ರೆ ಸ್ಥಳಾಂತರ ಮಾಡದಿರಲು ನಿರ್ಧಾರ

ಉಡುಪಿ, ನ.೨೧- ಪ್ರಸ್ತುತ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು, ಆಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ, ೧೧೫ ಕೋಟಿ ರೂ. ವೆಚ್ಚದಲ್ಲಿ ೨೫೦ ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆಯನ್ನು ನಿರ್ಮಿಸಲು ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ನಿರ್ಧರಿಸಿದೆ.

ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ.ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ಅಜ್ಜರಕಾಡಿನಲ್ಲಿ ಲಭ್ಯವಿರುವ ಸ್ಥಳದ ಪರಿಶೀಲನೆಯನ್ನು ನಡೆಸಿ ಈ ನಿರ್ಧಾರ ಕೈಗೊಂಡಿದೆ. ಬುಧವಾರ ನಡೆದ ಜಿಪಂ ಸಾಮಾನ್ಯ ಸಭೆಯಲ್ಲಿ ನೂತನ ಜಿಲ್ಲಾಸ್ಪತ್ರೆಯ ನಿರ್ಮಾಣಕ್ಕಾಗಿ ಈಗಿರುವ ಜಿಲ್ಲಾಸ್ಪತ್ರೆಯನ್ನು ತೆರವುಗೊಳಿಸಿ ಅದನ್ನು ಬ್ರಹ್ಮಾವರ ಸೇರಿದಂತೆ ವಿವಿದೆಡೆ ಸ್ಥಳಾಂತರಿಸಲು ನಿರ್ಣಯ ಕೈಗೊಳ್ಳ ಲಾಗಿತ್ತು. ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ಕೈಗೊಂಡ ನಿರ್ಧಾರದಿಂದ ಹೊಸ ಆಸ್ಪತ್ಪೆ ಕಟ್ಟಡ ನಿರ್ಮಾಣಗೊಳ್ಳುವವರೆಗೆ ಜಿಲ್ಲಾಸ್ಪತ್ರೆ ಈಗಿರುವಂತೆಯೇ ಮುಂದುವರಿಯಲಿದೆ. ಎಲ್ಲಾ ಸೇವೆಗಳೂ ಇಲ್ಲಿಯೇ ಲಭ್ಯವಾಗಲಿವೆ. ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ನಿವೇಶನದಲ್ಲಿ, ನೂತನ ಜಿಲ್ಲಾಸ್ಪತ್ರೆ ನಿರ್ಮಿಸಲು ಅಗತ್ಯವಿರುವ ಸ್ಥಳ ಲ್ಯವಿದ್ದು, ಇಲ್ಲಿಯೇ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಈಗ ತಯಾರಿಸಿದ ನೀಲ ನಕ್ಷೆಯನ್ನು ಬದಲಿಸಿ ಹೊಸ ನೀಲನಕ್ಷೆ ಸಿದ್ಧಪಡಿಸುವಂತೆ ಸಂಬಂಧಪಟ್ಟ ಇಂಜಿನಿಯರ್‌ಗೆ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲಾಸ್ಪತ್ರೆ ಆವರಣದಲ್ಲಿ ಈಗಿರುವ ಎಎನ್‌ಎಂ ತರಬೇತಿ ಕೇಂದ್ರದ ಕಟ್ಟಡವನ್ನು ಕೆಡವಿ ಆ ಜಾಗವೂ ಸೇರಿದಂತೆ ಹೊಸ ನೀಲನಕ್ಷೆ ತಯಾರಿಸುವಂತೆ ಅವರು ಸೂಚಿಸಿದರು. ಹೊಸ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ ರಸ್ತೆಯನ್ನು ಹೆಚ್ಚುವರಿಯನಿರ್ಮಿಸಲು ಸಹ ನಿರ್ಧರಿಸಲಾಯಿತು. ಇತ್ತೀಚೆಗೆ ನಿರ್ಮಿಸಿದ ಎಲ್ಲಾ ಹೊಸ ಕಟ್ಟಡಗಳನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲಾಸ್ಪತ್ರೆಗೆ ಐದು ಮಹಡಿಗಳ ಅತ್ಯಾಧುನಿಕ ಕಟ್ಟಡ ನಿರ್ಮಾಣಕ್ಕೆ ನೀಲ ನಕ್ಷೆ ಈಗಾಗಲೇ ಸಿದ್ದವಿದೆ. ಮುಂದೆ ಉಡುಪಿಯಲ್ಲಿ ಆರಂಭಗೊಳ್ಳುವ ಮೆಡಿಕಲ್ ಕಾಲೇಜನ್ನು ದೃಷ್ಟಿಯಲ್ಲಿಟ್ಟುಕೊಂಡು ಇದನ್ನು ರೂಪಿಸಲಾಗಿದೆ. ಇದರ ಗ್ರೌಂಡ್ ಫ್ಲೋರ್‌ನಲ್ಲಿ ಎಮರ್ಜೆನ್ಸಿ ಹಾಗೂ ಓಪಿಡಿ ಇದ್ದು, ಉಳಿದವು ಮೇಲಿನ ಮಹಡಿಗಳಲ್ಲಿರಲಿದೆ. ಹೊಸ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿ ಪ್ರಾರಂಭಗೊಂಡ ೨೪ ತಿಂಗಳಲ್ಲಿ ಪೂರ್ಣಗೊಳ್ಳಬೇಕಾಗಿದೆ.