ಉಡುಬಾಳ್: ಮನೆಯೊಳಗೆ ನುಗ್ಗಿದ ಮಳೆ ನೀರು

ಚಿಟಗುಪ್ಪ,ಜೂ.15-ತಾಲೂಕಿನ ಉಡುಬಾಳ್ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಗ್ರಾಮದ ಕೊನೆ ಅಂಚಿನ ಕೆಲವು ಮನೆಗಳಿಗೆ ಮಳೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಯಿತು.
ಮರುದಿನ ಗ್ರಾಮಕ್ಕೆ ತಹಸೀಲ್ದಾರ್ ರವೀಂದ್ರ ದಾಮ ಹಾಗು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಕ್ರಮ್ ಪಾಶಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮದ ಪಕ್ಕದ ಕಾಲುವೆಯಲ್ಲಿ ಬೆಳೆದ ಗಿಡಗಂಟಿಗಳಿಂದ ಮಳೆ ನೀರು ಸರಾಗವಾಗಿ ಹರಿದು ಹೋಗದ ಕಾರಣ ಹಿಮ್ಮುಖವಾಗಿ ಹರಿದು ಗ್ರಾಮದ ಮನೆಗಳಿಗೆ ನುಗ್ಗಿದೆ ಎಂದು ಗ್ರಾಮಸ್ಥರು ತಿಳಿಸಿದರು.
ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ಶನಿವಾರ ಉಡಬಾಳ್ ಗ್ರಾಮ ಪಂಚಾಯತ್ ಅಧಿಕಾರಿ ಬಸವಕಲ್ಯಾಣದಿಂದ ಜೆಸಿಬಿಯನ್ನು ತರಿಸಿ ಕಾಲುವೆ ಅಕ್ಕ-ಪಕ್ಕದಲ್ಲಿ ಬೆಳೆದ ಗಿಡಗಂಟಿಗಳನ್ನು ತೆರವುಗೊಳಿಸುವ ಕಾರ್ಯ ಪ್ರಾರಂಭಿಸಿದ್ದಾರೆ.