ಹಿರಿಯೂರು.ಮೇ 31; ಇಂದಿನ ಪ್ರಗತಿಪರ ದಿನಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮವಾದ ಶಿಕ್ಷಣವನ್ನು ಪಡೆಯಬೇಕು ಶಿಕ್ಷಣವೇ ಶಕ್ತಿ ಎಂದು ಚಿನ್ನದ ಪದಕ ಪುರಸ್ಕೃತರಾದ ಎಂ ಆರ್ ಅಮೃತ ಲಕ್ಷ್ಮಿ ಹೇಳಿದರು. ನಗರದ ಎಎಂಎಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದಿನ ವೈಜ್ಞಾನಿಕ ಪ್ರಪಂಚದಲ್ಲಿ ಕಂಪ್ಯೂಟರ್ ಗಣಿತ ವಿಜ್ಞಾನ ಒಂದಕ್ಕೊಂದು ಸಂಬಂಧಿಸಿದ ವಿಷಯಗಳಾಗಿವೆ ಇಂಗ್ಲಿಷ್ ಗಣಿತ ಯಾವುದು ಕಷ್ಟಕರವಾದ ವಿಷಯವಲ್ಲ ಆಸಕ್ತಿಯಿಂದ ವ್ಯಾಸಂಗ ಮಾಡಿದರೆ ತುಂಬಾ ಸುಲಭವಾದ ವಿಷಯಗಳಾಗಿವೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಕಂಪ್ಯೂಟರ್ ನ ಅಗತ್ಯತೆ ಹೆಚ್ಚಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯು ಸಹ ಕಂಪ್ಯೂಟರ್ ಶಿಕ್ಷಣವನ್ನು ಕಲಿಯಬೇಕು ಎಂದು ತಿಳಿಸಿದರು.ವಾಣಿವಿಲಾಸ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತ ರಾಯಪ್ಪನವರು ಮಾತನಾಡಿ ಇಂದು ಪ್ರಪಂಚದ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಕಾರ್ಯ ನಿರ್ವಹಿಸುತ್ತಿದ್ದು ಇಲ್ಲಿನ ವಿದ್ಯಾರ್ಥಿನಿಯರು ಯಾವುದಕ್ಕೂ ಕಮ್ಮಿ ಇಲ್ಲ ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರಗತಿ ಸಾಧಿಸಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಎಎಂಎಸ್ ಕಂಪ್ಯೂಟರ್ ತರಬೇತಿ ಕೇಂದ್ರದ ಮುಖ್ಯಸ್ಥರಾದ ಮುರಳಿಧರ್, ರೋಹಿಣಿ ಮುರುಳಿಧರ್, ಕರವೇ ಅಧ್ಯಕ್ಷರಾದ ಕೃಷ್ಣಮೂರ್ತಿ ಪೂಜಾರ್, ಎಂ ರವೀಂದ್ರನಾಥ್, ಕಿರಣ್ ಮಿರಜ್ಕರ್, ಮುರಳಿಧರನ್, ಗೋವಿಂದರಾಜ್, ಬಿ.ಎಲ್ ಗೌಡ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅನ್ನಪೂರ್ಣಮ್ಮ , ವಾಣಿವಿಲಾಸ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಸೌಮ್ಯ , ಅಬಾಕಸ್ ಶಿಕ್ಷಕಿ ಲಕ್ಷ್ಮಿ, ಸ್ಪೋಕನ್ ಇಂಗ್ಲಿಷ್ ನ ಶಿಕ್ಷಕಿ ಭಾಗ್ಯ, ಉಪನ್ಯಾಸಕ ರಾಮಲಿಂಗಪ್ಪ, ಕಂಪ್ಯೂಟರ್ ಶಿಕ್ಷಕಿ ಶ್ವೇತಾ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.