ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಕರೆ


ಸಂಜೆವಾಣಿ ವಾರ್ತೆ
ಕುಕನೂರು, ಜೂ.15: ತಾಲೂಕಿನ ಹಿರೇಬೀಡನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಕದ್ರಳ್ಳಿ  ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ನಾಲಾ ಸುಧಾರಣೆ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ಶಿಭಿರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಮನಿ  ಮಾತನಾಡಿ, ಆರೋಗ್ಯ ಪ್ರತಿಯೋಬ್ಬರ ಜೀವನದಲ್ಲಿ ಅತೀಮುಖ್ಯ ಅದೇ ರೀತಿ ತಾಲೂಕಿನ ಕೆಲವು ಗ್ರಾಮಗಳಲ್ಲಿ ವಾಂತಿ ಭೇದಿ ಪ್ರಕರಣಗಳು ಕಂಡುಬಂದಿದ್ದು ಎಲ್ಲರೂ ಶುದ್ಧವಾದ ಕುಡಿಯುವ ಉಪಯೋಗಿಸಬೇಕು, ಬಿಸಿಯಾದ ಆಹಾರ ಸೇವಿಸಬೇಕು, ಶೌಚಾಲಯಗಳನ್ನು ಕಡ್ಡಾಯವಾಗಿ ಉಪಯೋಗಿಸಬೇಕು ಎಂದರು. ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಕೂಲಿಕಾರರು ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಕೆಮ್ಮ, ನೆಗಡಿ ಜ್ವರ ಸೇರಿದಂತೆ ಸಕಗಕರೆ ಖಾಯಿಲೆ, ರಕ್ತದೊತ್ತಡದಂತಹ ಖಾಯಿಲೆಗಳಿಂದ ದೂರವಿರಲು ಆರೋಗ್ಯ ತಪಾಸಣೆ ಸಹಾಕಾರಿ ಯಾಗಲಿದೆ ಎಂದರು.
ಸ್ಥಳದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ದೊಡ್ಡಬಸಮ್ಮ , ಆರೋಗ್ಯ ಇಲಾಖೆ ಅಧಿಕಾರಿಗಳು, ಕೆ‌ಎಚ್.ಪಿಟಿ ಸಂಯೋಜಕರು, ಐ.ಇ.ಸಿ ಸಂಯೋಜಕರು ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಕಾಯಕ ಬಂಧುಗಳು ಹಾಜರಿದ್ದರು.

One attachment • Scanned by Gmail