ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ

ಕೋಲಾರ,ಮಾ.೨೬: ವಿದ್ಯಾರ್ಥಿಗಳು ವಿದ್ಯೆಯನ್ನು ಕಲಿಯಲು ಎಷ್ಟು ಪ್ರಾಮುಖ್ಯತೆಯನ್ನು ಕೊಡುತ್ತೇವೆ ಅಷ್ಟೇ ಪ್ರಾಮುಖ್ಯತೆಯನ್ನು ಆರೋಗ್ಯವನ್ನು ಕಾಪಾಡಿಕೊಳ್ಳಲು ಕೊಡಬೇಕೆಂದು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಶಿಕ್ಷಣ ಸಂಸ್ತೆಗಳ ಆಡಳಿತ ಅಧಿಕಾರಿ ಎಸ್.ಲಕ್ಷ್ಮೀನಾರಾಯಣರೆಡ್ಡಿ ತಿಳಿಸಿದರು.
ಬಂಗಾರಪೇಟೆ ತಾಲೂಕಿನ ಹಂಚಾಳ ಗೇಟ್‌ನಲ್ಲಿರುವ ಪೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಶಿಕ್ಷಣ ಸಂಸ್ಥೆಗಳಲ್ಲಿ ಕಾಲೇಜ್ ಆಫ್ ನರ್ಸಿಂಗ್, ಸ್ಕೂಲ್ ಆಫ್ ನರ್ಸಿಂಗ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ೫ ರಿಂದ ೭ನೇ ತರಗತಿ ಮತ್ತು ೮ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಅರೋಗ್ಯ ಮತ್ತು ಸ್ವಚ್ಚತೆಯ ಬಗ್ಗೆ ಅರಿವನ್ನು ಮೂಡಿಸುವ ಕಾರ್ಯಕ್ರಮದಲ್ಲಿ ಬಯಾಟ್ರಿಕ್ ಆಹಾರ ಸಾಮಾಗ್ರಿಗಳನ್ನು ಮತ್ತು ರಕ್ತವನ್ನು ಹೆಚ್ಚಿಸಿಕೊಳ್ಳಲು ಬೇಕಾದ ಸಾಮಾಗ್ರಿಗಳನ್ನು ವಿತರಿಸಿ ಮಾನಾಡುತ್ತಿದ್ದರು.
ಕೊರೋನಾ ಮತ್ತೆ ಉಲ್ಭಣಗೊಳ್ಳುತ್ತಿದ್ದು, ಅದರ ಅಂಗವಾಗಿ ಸರ್ಕಾರ ಕೈಗೊಂಡಿರುವ ಮುಂಜಾಗೃತ ಕ್ರಮಗಳನ್ನು ನಾವು ಸರಿಯಾದ ರೀತಿಯಲ್ಲಿ ಸಕಾಲಕ್ಕೆ ಪಾಲಿಸಿ ನಮ್ಮ ಮನೆಯ ಹಾಗೂ ನೆರೆ ಹೊರೆಯದವರಿಗೂ ತಿಳಿಸಬೇಕೆಂದು ಕರೆ ನೀಡಿದರು. ಇದೇ ರೀತಿ ಪ್ರತಿ ತಿಂಗಳಿಗೊಮ್ಮೆ ಇಂತಹ ಕಾರ್ಯಕ್ರಮಗಳನ್ನು ಆಯೊಜಿಸಿದರೆ ಮಕ್ಕಳು ತಮ್ಮ ಆರೋಗ್ಯವನ್ನು ಮತ್ತು ಶುಚಿತ್ವವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ದೀಪಾಕ್ಷಿ, ಝಾನ್ಸಿ ಪ್ರಸನ್ನ, ಉಪನ್ಯಾಸಕರಾದ ಹಸೀನಾ, ಪವಿತ್ರ ಇನ್ನಿತರರು ಉಪಸ್ಥಿತರಿದ್ದರು.