ಉತ್ತಮ ಭವಿಷ್ಯಕ್ಕೆ ಕೌಶಲ್ಯ ಅಗತ್ಯ :ಯಡಮಲ್ಲೆ

ಬೀದರ್:ಆ.6: ಉಜ್ವಲ ಭವಿಷ್ಯಕ್ಕೆ ವಿದ್ಯಾರ್ಥಿಗಳು ಕೌಶಲ ಬೆಳೆಸಿಕೊಳ್ಳಬೇಕು ಎಂದು ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಿಠ್ಠಲರೆಡ್ಡಿ ಯಡಮಲ್ಲೆ ಹೇಳಿದರು.
ಇಲ್ಲಿಯ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಕೇಂದ್ರದಲ್ಲಿ ಸರ್ಕಾರಿ ತಾಂತ್ರಿಕ ವಿದ್ಯಾಲಯದ ವಾಣಿಜ್ಯ ಅಭ್ಯಾಸದ ಕೊನೆಯ ಸೆಮಿಸ್ಟರ್ ವಿದ್ಯಾರ್ಥಿಗಳ ಐದು ದಿನಗಳ ಜೀವನ ಕೌಶಲ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಶೀಘ್ರಲಿಪಿಕಾರರು ಹಾಗೂ ಭಾಷೆ ಮೇಲೆ ಹಿಡಿತ ಇರುವವರಿಗೆ ಎಲ್ಲ ಕ್ಷೇತ್ರಗಳಲ್ಲೂ ಉದ್ಯೋಗ ಅವಕಾಶಗಳು ಇವೆ ಎಂದು ತಿಳಿಸಿದರು.
ಉತ್ತಮ ಭಾಷೆ ಕಲಿಕೆಗಾಗಿ ವಿದ್ಯಾರ್ಥಿಗಳು ಆಯಾ ಭಾಷೆಗಳ ಪತ್ರಿಕೆ ಹಾಗೂ ಪುಸ್ತಕಗಳನ್ನು ಓದಬೇಕು ಎಂದು ಹೇಳಿದರು.
ಕಮರ್ಷಿಯಲ್ ಪ್ರಾಕ್ಟೀಸ್ ವಿಭಾಗದ ಮುಖ್ಯಸ್ಥ ಬಕ್ಕಪ್ಪ ನಿರ್ಣಾಕರ್, ಉಪನ್ಯಾಸಕ ಶಿವಕುಮಾರ ಕಟ್ಟೆ ಮಾತನಾಡಿದರು. ಸರ್ಕಾರಿ ಪಾಲಿಟೆಕ್ನಿಕ್ ಉಪನ್ಯಾಸಕ ತಾನಾಜಿ ಬಿರಾದಾರ, ಸಹಾರ್ದ ಉಪನ್ಯಾಸಕರಾದ ಮಂಜುನಾಥ ಭಾಗವತ್, ಎಸ್.ಜಿ. ಪಾಟೀಲ ಇದ್ದರು. ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಅನಿಲ್ ಪಿ. ವಂದಿಸಿದರು.