
ಕಲಘಟಗಿ, ಸೆ. 5: ಉತ್ತಮ ಶಿಕ್ಷಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ. ಉತ್ತಮ ಶಿಕ್ಷಕರ ಮಾರ್ಗದರ್ಶನದಿಂದ ಗುರಿ ಸಾಧಿಸಿ. ನೀವು ಓದಿರುವ ಶಾಲೆ- ಕಾಲೇಜಿಗೆ ಹೆಸರು ತನ್ನಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು.
ಕಲಘಟಗಿಯ ಗುಡ್ ನ್ಯೂಸ್ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಲಘಟಗಿ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಅವರು ಮಾತನಾಡಿದರು.
ಸಮಾರಂಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕಾಲೇಜಿನ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.