ಉತ್ತಮ ಸಮಾಜ ನಿರ್ಮಾಣವಾಗಲಿ  : ಶ್ರೀಮತಿ ರೇಖಾ

ಸಂಜೆವಾಣಿ ವಾರ್ತೆ

ಹಿರಿಯೂರು :ಡಿ. 20 – ಉತ್ತಮ ಸಮಾಜ ನಿರ್ಮಾಣದಲ್ಲಿ ಮಹಿಳೆಯರಷ್ಟೇ  ಪುರುಷರ ಪಾತ್ರವು ಮಹತ್ವದ್ದಾಗಿದೆ ಎಂದು ಮಹಿಳಾ ಪೊಲೀಸ್ ಮುಖ್ಯಪೇದೆ  ಶ್ರೀಮತಿ ಎನ್ ರೇಖಾ ಹೇಳಿದರು. ನಗರದ ವಾಲ್ಮೀಕಿ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಮಧ್ಯವರ್ಜನ ಶಿಬಿರದಲ್ಲಿ ಅವರು ಮಾತನಾಡಿದರು. ಕುಡಿತದ ಚಟಕ್ಕೆ ಬಲಿಯಾಗದೆ ಉತ್ತಮ ಸಂಸಾರ ಮಾಡಿ  ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿನಯ್ ಕುಮಾರ್ ಸುವರ್ಣ ತಾಲೂಕು ಯೋಜನಾಧಿಕಾರಿ ಹರಿಪ್ರಸಾದ್ ರೈ ಹಾಗು ಅಧಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು.