ಉತ್ತಮ ಸಾಧನೆ

ಬಾದಾಮಿ, ಮೇ12: ಇಲ್ಲಿನ ಪ್ರತಿಷ್ಠಿತ ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾದ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ 96% ರಷ್ಟು ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಸಮೃದ್ದಿ ಈರಗೌಡರ 619 ಅಂಕಗಳನ್ನು ಪಡೆಯುವ ಮೂಲಕ ತಾಲೂಕಿಗೆ ದ್ವಿತೀಯ ಸ್ಥಾನ, ಬಾನು ಬೇಗಂ ಲಡಖಾನವರ 616 ಅಂಕ ಪಡೆದು ತಾಲೂಕಿಗೆ ತೃತೀಯ ಸ್ಥಾನ, ತನುಜಾ ಪಾಟೀಲ 574 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಮುಖ್ಯಶಿಕ್ಷಕರು ತಿಳಿಸಿದ್ದಾರೆ.