ಉತ್ತರದಲ್ಲಿ ಇನ್ನೂ ನಾಲ್ಕು ದಿನ ಮಳೆ

ನವದೆಹಲಿ, ಜು.೩೧- ಉತ್ತರ ಭಾರತದಲ್ಲಿ ಮಳೆ ನಿಲ್ಲುವ ಹಾಗೆ ಕಾಣುತ್ತಿಲ್ಲ.ದೇಶದ ಪೂರ್ವ, ಈಶಾನ್ಯ ಮತ್ತು ಪೂರ್ವ ಕೇಂದ್ರೀಯ ಭಾಗಗಳಲ್ಲಿ ಮುಂದಿನ ನಾಲೈದು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿರಂತರ ಮಳೆಯು ಭಾರತದ ಅನೇಕ ಭಾಗಗಳಲ್ಲಿ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ.ಮಳೆಯ ಅವಾಂತರದಿಂದಾಗಿ ಶಾಲಾ-ಕಾಲೇಜ ಮುಚ್ಚಲ್ಪಟವು ಮಳೆಯಿಂದ ಬಾಧಿತ ಜನರನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು .ಮುಂಗಾರು ಮಳೆಯಿಂದಾಗಿ ಪ್ರವಾಹ, ಸಂಚಾರ ಅಸ್ತವ್ಯಸ್ತತೆ, ವಿದ್ಯುತ್ ಮತ್ತು ನೀರು ಪೂರೈಕೆಯಲ್ಲಿ ವ್ಯತ್ಯಯ, ಹೀಗೆ ಜನರು ನಾನಾ ತೊಂದರೆ ಅನುಭವಿಸುತ್ತಿದ್ದಾರೆ.
ಒಡಿಶಾ, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ-ಚಂಡೀಗಢ-ದೆಹಲಿ, ಮಧ್ಯಪ್ರದೇಶ, ಜಾರ್ಖಂಡ್, ಬಿಹಾರ, ಮಹಾರಾಷ್ಟ್ರ ಮತ್ತು ಗುಜರಾತ್ ಮತ್ತು ಈಶಾನ್ಯ ಭಾರತದ ರಾಜ್ಯಗಳ ಕೆಲವು ಭಾಗಗಳು ಮುಂಬರುವ ದಿನಗಳಲ್ಲಿ ಮಳೆಯ ತೀವ್ರತೆ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ವಾರ ಸುರಿದ ವ್ಯಾಪಕ ಮಳೆಯಿಂದ ತತ್ತರಿಸಿರುವ ಮುಂಬೈ ಮಂಗಳವಾರದವರೆಗೆ ‘ಗ್ರೀನ್’ ಅಲರ್ಟ್‌ನಲ್ಲಿ ಇರಿಸಲಾಗಿದ್ದು, ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ ೨ ಮತ್ತು ೩ ರಂದು ದೆಹಲಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಮಳೆಯಿಂದ ತತ್ತರಿಸಿರುವ ತೆಲಂಗಾಣದಲ್ಲಿ ಇಂದು ಕೆಲವೆಡೆ ಸಾಧಾರಣ ಮಳೆಯಾಗಲಿದೆ. ರಾಜಸ್ಥಾನ, ಒಡಿಶಾ ಮತ್ತು ಜಾರ್ಖಂಡ್‌ನ ಪೂರ್ವ ಭಾಗಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ‘ಭಾರೀಯಿಂದ ಅತಿ ಭಾರೀ’ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅನೇಕ ಕಡೆ ಸಂಪರ್ಕ ಕಡಿತವಾಗಿದೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕೆಲವು ಪ್ರದೇಶಗಳಲ್ಲಿ ಮಳೆ ಪ್ರಮಾಣ ತಗ್ಗಿದೆ. ಆದರೆ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಬಹುತೇಕ ಎಲ್ಲ ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗಿವೆ. ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಜೊತೆಗೆ ಪೂರ್ವ ಭಾರತದ ಇತರ ಕಡೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಈಶಾನ್ಯ ರಾಜ್ಯದಲ್ಲಿ ಮುಂದಿನ ೫ ದಿನಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ.
ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ-ಚಂಡೀಗಢ ಮತ್ತು ದೆಹಲಿ ಉತ್ತರ ಭಾರತದ ಇತರ ಸ್ಥಳಗಳಲ್ಲಿ ಜನರು ಆಗಸ್ಟ್ ೨ ಮತ್ತು ೩ ರಂದು ಮಳೆ ಬೀಳಬಹುದು.
ಮುಂದಿನ ಎರಡು ದಿನಗಳ ಕಾಲ ಮುಂಬೈ ಮತ್ತು ಪಾಲ್ಘರ್‌ನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಸಧ್ಯಕ್ಕೆ ‘ಗ್ರೀನ್’ ಅಲರ್ಟ್ ಜಾರಿಯಲ್ಲಿದೆ.