ಉತ್ತರ ಭಾರತದಲ್ಲಿ ವರ್ಷಧಾರೆ ರೆಡ್ ಅಲರ್ಟ್ ಘೋಷಣೆ

ನವದೆಹಲಿ,ಜು.೯- ದೇಶದ ವಿವಿದೆಡೆ ಸುರಿದ ಧಾರಾಕಾರ ಮಳೆಯಿಂದ ಉತ್ತರ ಭಾರತ ತತ್ತರಿಸಿದೆ. ದೆಹಲಿಯಲ್ಲಿ ಓರ್ವ ಹಾಗು ರಾಜಸ್ತಾನದಲ್ಲಿ ನಾಲ್ಕು ಮಂದಿ ಸೇರಿದಂತೆ ಮಳೆ ಅನಾಹುತಕ್ಕೆ ಐದು ಮಂದಿ ಬಲಿಯಾಗಿದ್ದಾರೆ. ಬಾರಿ ಮಳೆಯಿಂದ ದೇಶದ ಹಲವು ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಳದಿ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ೨೧ ವರ್ಷದ ಬಳಿಕ ಅತ್ಯಧಿಕ ಮಳೆಯಾಗಿದೆ. ಇದರ ಪರಿಣಾಮ ಛಾವಣಿ ಕುಸಿದು ಓರ್ವ ಮಹಿಳೆ ಮೃತಪಟ್ಟಿದ್ದರೆ. ರಾಜಸ್ತಾನದಲ್ಲಿ ಮಳೆ ಸಂಬಂಧಿತ ಅನಾಹುತದಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಮಳೆಯ ಹಿನ್ನೆಲೆಯಲ್ಲಿ ಹಲವು ಭಾಗಗಳು ಜಾಲವೃತವಾಗಿವೆ. ಇನ್ನೂ ಕಡೆ ಸಂಚಾರ ದಟ್ಟಣೆ ಎದುರಾಗಿ ವಾಹನ ಸಂಚಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ನಿರಂತರ ಮಳೆ ಮತ್ತು ಭೂಕುಸಿತದ ನಂತರ ವಾರ್ಷಿಕ ಅಮರನಾಥ ಯಾತ್ರೆ ಸತತ ಮೂರನೇ ದಿನಕ್ಕೆ ಸ್ಥಗಿತಗೊಳಿಸಲಾಗಿದೆ, ಸಾವಿರಾರು ಯಾತ್ರಾರ್ಥಿಗಳು ಜಮ್ಮು ಮತ್ತು ಗುಹಾ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡು ಪರದಾಡುವಂತಾಗಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಪೂರ್ವ ರಾಜಸ್ಥಾನ, ಹರಿಯಾಣ, ಚಂಡೀಗಢ, ಪಂಜಾಬ್ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಬಾರಿ ಮಳೆಯಿಂದ. ಭೂಕುಸಿತ ಮತ್ತು ಹಠಾತ್ ಪ್ರವಾಹಗಳಿಂದ ವಿವಿಧ ಪ್ರದೇಶಗಳಲ್ಲಿ ರಸ್ತೆ ಸಂಚಾರ ನಿರ್ಬಂಧಿಸಿವೆ.
ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕ ಪ್ರದೇಶಗಳಲ್ಲಿ ಮತ್ತು ಪೂರ್ವ ರಾಜಸ್ಥಾನ, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಪಂಜಾಬ್‌ನಲ್ಲಿ ನಾಳೆಯತನಕ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ಕೆಲ ದಿನಗಳಲ್ಲಿ ಬಾರಿ ಮಳೆಯಾಗಿದೆ ಎಂದು ಭಾರತೀಯ ಮಾಪನ ಇಲಾಖೆ ಮುನ್ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಹಲವಾರು ಭಾಗಗಳಲ್ಲಿ ಜಲಾವೃತದಿಂದ ಸಂಚಾರ ದಟ್ಟಣೆ ಎದುರಾಗಿತ್ತು. ಇಂದು ಕೂಡ ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.ರಾಜಸ್ತಾನದ ರಾಜ್‌ಸಮಂದ್, ಜಲೋರ್, ಪಾಲಿ, ಅಜ್ಮೀರ್, ಅಲ್ವಾರ್, ಬನ್ಸ್ವಾರಾ, ಭರತ್‌ಪುರ, ಭಿಲ್ವಾರಾ, ಬುಂದಿ, ಚಿತ್ತೋರ್‍ಗಢ್ ಸೇರಿದಂತೆ ರಾಜಸ್ಥಾನದ ಒಂಬತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹರ್ಯಾಣ ಮತ್ತು ಪಂಜಾಬ್‌ನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಸಾಮಾನ್ಯ ಮಿತಿಗಿಂತ ಕಡಿಮೆಯಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಕಾಶ್ಮೀರದಲ್ಲಿ ಝೀಲಂ ನದಿ ಮತ್ತು ಅದರ ಉಪನದಿಗಳು ಭಾರೀ ಮಳೆಯಿಂದಾಗಿ ನೀರಿನ ಮಟ್ಟದಲ್ಲಿ ತ್ವರಿತ ಏರಿಕೆ ಕಂಡಿದೆ, ಜಲಮೂಲಗಳ ಬಳಿ ವಾಸಿಸುವ ಜನರು ಜಾಗರೂಕರಾಗಿರಲು ಮತ್ತು ನೀರಿನ ಸಮೀಪಕ್ಕೆ ಹೋಗುವುದನ್ನು ತಪ್ಪಿಸಲು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.