ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ


ಬಳ್ಳಾರಿ,ಮಾ.3: ಜಿಲ್ಲೆಯ ಸ್ವ ಸಹಾಯ ಗುಂಪುಗಳಿಂದ ತಯಾರಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಶ್ರೀ ಕನಕ ದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಮಾ.2ರಿಂದ ಮಾ.7ರವರೆಗೆ  ಆಯೋಜಿಸಲಾಗಿದೆ.
ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಗುರುವಾರ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಉತ್ಪನ್ನಗಳನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಪಂನ ಯೋಜನಾ ನಿರ್ದೇಶಕ ಲಕ್ಷ್ಮಣ್.ಬಿ ಶೃಂಗೇರಿ, ಜಿಪಂ ಎನ್.ಐ.ಸಿಯ ತಾಂತ್ರಿಕ ನಿರ್ದೇಶಕ ಶಿವಪ್ರಕಾಶ್ ವಸ್ತ್ರದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಸಿಡಿಪಿಒ ಉಷಾ, ಜಿಪಂನ ಸಹಾಯಕ ನಿರ್ದೇಶಕ ಬಸವರಾಜ್ ಹಿರೇಮಠ ಸೇರಿದಂತೆ ಇತರರು ಇದ್ದರು.