
ನವದೆಹಲಿ,ಸೆ.೭- ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ “ಸನಾತನ ಧರ್ಮ ನಿರ್ಮೂಲನೆ” ಹೇಳಿಕೆ, ಇಂಡಿಯಾ ಮೈತ್ರಿಕೂಟದ ಸದಸ್ಯರು ತಾವಾಗಿಯೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಹೊಸ ಅಸ್ತ್ರ ನೀಡಿದಂತಾಗಿದೆ.
ಮುಂಬರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಇದೇ ವಿಷಯವನ್ನು ಹೊಸ ದಾಳವಾಗಿ ಉರುಳಿಸಲು ಮುಂದಾಗಿದೆ. ಹೀಗಾಗಿ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ ಎದುರಿಸುವಂತಾಗಿದೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಉದಯನಿಧಿ ಸ್ಟಾಲಿನ್ ಹೇಳಿಕೆ ವಿರುದ್ದ ದೇಶಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿರುವುದು ಇಂಡಿಯಾ ಮೈತ್ರಿಕೂಟ ಇದೀಗ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಹಾಗೂ ಇಲ್ಲ ಸುಮ್ಮನಿರುವ ಪರಿಸ್ಥಿಯಂತೂ ಇಲ್ಲದ ಉಭಯ ಸಂಕಟದ ಪರಿಸ್ಥಿತಿಗೆ ಸಿಲುಕಿದೆ.
ಭಾರತ ವರ್ಸಸ್ ಇಂಡಿಯಾ’ ಹೋರಾಟ ನಡೆಯುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಸನಾತನ ಧರ್ಮದ ವಿರುದ್ದದ ಹೋರಾಟದಲ್ಲಿ ಭಾಗಿಯಾಗಲು ಎಲ್ಲಾ ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರಿಕೆಗೆ ಕರೆ ನೀಡಿದ್ದಾರೆ.
ಸನಾತನ ಧರ್ಮ’ವನ್ನು ರಕ್ಷಿಸುವ ಅಗತ್ಯತೆಯ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಮುಂದಿಟ್ಟುಕೊಂಡು ಬಿಜೆಪಿ ಹೋರಾಟ ಮಾಡಲು ಮುಂದಾಗಿದೆ.
ಮುಂಬರುವ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಅಸ್ತ್ರ ಮಾಡಿಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.