ಉದ್ದ ಜಿಗಿತದಲ್ಲಿ ಸೃಷ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

ಕಲಬುರಗಿ,ಸೆ.16-ಇಲ್ಲಿನ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಚೇರಿ ಆಶ್ರಯದಲ್ಲಿ ಪ್ರಸಕ್ತ ಸಾಲಿನ 14 ವರ್ಷದೊಳಗಿನ ಬಾಲಕ-ಬಾಲಕಿಯರ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಳಂದ ತಾಲೂಕಿನ ರುದ್ರವಾಡಿ ಗ್ರಾಮದಲ್ಲಿರುವ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲೆ ವಿದ್ಯಾರ್ಥಿನಿ ಕು.ಸೃಷ್ಟಿ ಸಿದ್ದರಾಮ ಪಾಟೀಲ್ ಅವರು ಉದ್ದಜಿಗಿತ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವುದಕ್ಕೆ ಎಚ್‍ಕೆಇ ಸೊಸೈಟಿ ಅಧ್ಯಕ್ಷ ಡಾ.ಭೀಮಾಶಂಕರ ಸಿ. ಬಿಲಗುಂದಿ, ಉಪಾಧ್ಯಕ್ಷ ಡಾ.ಎಸ್. ಆರ್. ಹರವಾಳ, ದೈಹಿಕ ಶಿಕ್ಷಕ ಸಂಗನಬಸವ ಸ್ವಾಮಿ, ಸಂಜಯ ಪಾಟೀಲ್, ಮಹಾನಂದ, ಚನ್ನಮ್ಮ ಮತ್ತಿತರರು ಅಭಿನಂದಿಸಿದ್ದಾರೆ.