ಉದ್ಧಟತನ ಬಿಡಿ, ಸಾರಿಗೆ ನೌಕರರ ಮನವೊಲಿಸಿ

ಬೀದರ್,ಏ.೧೦- ಸಾರಿಗೆ ನೌಕರರ ಮುಷ್ಕರದಿಂದ ಜನರಿಗೆ ಆಗುತ್ತಿರುವ ಅನಾನುಕೂಲವನ್ನು ತಪ್ಪಿಸುವ ಜವಾಬ್ದಾರಿ ಸರ್ಕಾರದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಉದ್ಧಟತನ ಬಿಟ್ಟು ಸಾರಿಗೆ ನೌಕರರ ಮನವೊಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬಸವಕಲ್ಯಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಉದ್ಧಟತನ ನಡವಳಿಕೆ ತೋರುತ್ತಿದ್ದಾರೆ. ಮುಂದೆ ಇದಕ್ಕೆ ಪ್ರಾಯಶ್ಚಿತ ಅನುಭವಿಸುತ್ತಾರೆ. ಅಧಿಕಾರ ಶಾಶ್ವತವಲ್ಲ, ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಉದ್ಧಟತನ ಬಿಟ್ಟು ಸಾರಿಗೆ ನೌಕರರ ಮನವೊಲಿಸಬೇಕು. ಮುಖ್ಯಮಂತ್ರಿಯಾಗಲಿ, ಸಚಿವರಾಗಲಿ ಯಾರು ಮೇಲಿಂದ ಇಳಿದು ಬಂದಿಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಸಾರಿಗೆ ನೌಕರರ ಮುಷ್ಕರ ೪ನೇ ದಿನಕ್ಕೆ ಕಾಲಿಟ್ಟಿದೆ. ಮಾತುಕತೆಗೆ ಕರೆಯಲ್ಲ ಎಂದರೆ ಏನರ್ಥ. ವಿಧಾನಸೌಧದಲ್ಲಿ ಅಧಿಕಾರ ನಡೆಸುತ್ತಿರುವುದು ಏತಕ್ಕೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಸಾರಿಗೆ ನೌಕರರ ಮನವೊಲಿಸಿ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲಗಳನ್ನು ತಪ್ಪಿಸಬೇಕು ಎಂದು ಸರ್ಕಾರದ ಜವಾಬ್ದಾರಿ ಎಂದರು.
ಮುಖ್ಯಮಂತ್ರಿ ಯಡಿಯೂರಪ್ಪ ಉದ್ಧಟತನ ಬಿಟ್ಟು ನೌಕರರ ಸಮಸ್ಯೆ ಬಗೆಹರಿಸುವ ಕಡೆ ಗಮನ ಹರಿಸಬೇಕು ಎಂದರು.
ಖಜಾನೆ ಖಾಲಿಯಾಗುತ್ತಿದೆ
ರಾಜ್ಯದಲ್ಲಿ ಖಜಾನೆ ಖಾಲಿಯಾಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಖಜಾನೆಯನ್ನು ಖಾಲಿ ಮಾಡುತ್ತಿದ್ದಾರೆಂದು ಅವರು ದೂರಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವರುಗಳ ನಡವಳಿಕೆ, ಉದ್ಧಟತನ ಇದೇ ರೀತಿ ಮುಂದುವರೆದರೆ ಕರ್ನಾಟಕ ಬಿಜೆಪಿ ಮುಕ್ತ ಆಗುವ ದಿನಗಳು ದೂರ ಇಲ್ಲ ಎಂದರು.
ಕೊರೊನಾ ತಡೆಗೆ ರಾಜ್ಯದ ಕೆಲವೆಡೆ ಇಂದು ರಾತ್ರಿಯಿಂದ ನೈಟ್‌ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಇದು ಎಷ್ಟರ iಟ್ಟಿಗೆ ಸಫಲವಾಗುತ್ತದೊ ಎಂಬುದನ್ನು ಕಾದು ನೋಡೋಣ ಎಂದರು.