ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆ

ಕಲಬುರಗಿ,ನ.04:ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ದಿಂದ ಏರ್ಪಡಿಸಲಾಗಿದ್ದ 30 ದಿನಗಳ ವಿದ್ಯುತ್ ಗೃಹೋಪಯೋಗಿ ವಸ್ತುಗಳು ರಿಪೇರಿ, ಸರ್ವಿಸ್ ಹಾಗೂ ಫ್ಯಾಶನ ಡಿಸೈನಿಂಗ್ ಕೌಶಲ್ಯ ಆಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಕಲಬುರಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಶಂಕರ ಎನ್. ಪಂಚಾಳ ಅವರು ಇತ್ತೀಚೆಗೆ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕ ಜಿ.ಯು. ಹುಡೇದ್ ಮಾತನಾಡಿದರು. ಕಲಬುರಗಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‍ನ ಸಹಾಯಕ ಮಹಾ ವ್ಯವಸ್ಥಾಪಕರಾದ ಇಂತೆಸಾರ ಹುಸೇನ್ ಅವರು ಬ್ಯಾಂಕಿನ ಸಾಲ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.