ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ,ನ.30:ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಕೌಶಲ್ಯಾಭಿವೃದ್ಧಿ, ಉದ್ಯಮಶೀ ಲ ತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಕ್ಯಾಡ್‍ಮ್ಯಾಕ್ಸ್ ಸಲ್ಯೂಷನ್ಸ್ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 3 ದಿನಗಳ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮವನ್ನು ಕಲಬುರಗಿ ಮಲ್ಲಿಕಾರ್ಜುನ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾದ ಆನಂದ್ ಸಜ್ಜನ್ ಇತ್ತೀಚೆಗೆ ಕಲಬುರಗಿಯಲ್ಲಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಸಿಡಾಕ್ ಫ್ಯಾಕಲ್ಟಿ ಆ್ಯಂಡ್ ಕನ್ಸ್‍ಲ್ಟಂಟ್‍ರಾದ ಸೈಯದ್ ಆಷ್ಫಕ್ ಅವರು ಮಾತನಾಡಿ, ತರಬೇತಿಯಲ್ಲಿ ಸ್ವಯಂ ಉದ್ಯಮಗಳ ಸ್ಥಾಪನೆ ಮಾಡುವ ವಿಧಾನ ಹಾಗೂ ಸ್ವಯಂ ಉದ್ಯೋಗಕ್ಕೆ ಇರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಕಲಬುರಗಿ ಸಿಡಾಕ್ ತರಬೇತುದಾರ ಜಯಶ್ರೀ ಎಸ್. ಪಾಟೀಲ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.