ಉದ್ಯಮಶೀಲತಾ ಶಿಬಿರ

ತಿಪಟೂರು, ಜು. ೩೦- ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಪಂಚಾಯಿತಿ ತುಮಕೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ತಾಲ್ಲೂಕು ಪಂಚಾಯ್ತಿ, ಶಿಶು ಅಭಿವೃದ್ಧಿ ಯೋಜನೆ, ತಾಲ್ಲೂಕು ಸ್ತ್ರೀಶಕ್ತಿ ಒಕ್ಕೂಟ, ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಜಿಪಿಎಲ್‌ಎಫ್ ಒಕ್ಕೂಟಗಳ ಸಹಯೋಗದಲ್ಲಿ “ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ” ಅಂಗವಾಗಿ ೨೦೨೧- ೨೨ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ ಅನುಷ್ಠಾನಗೊಳಿಸಿರುವ ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಆಯ್ಕೆಯಾದ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರಿಗೆ ೩ ದಿನಗಳ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉಪವಿಭಾಗಾಧಿಕಾರಿ ಕಲ್ಪಶ್ರೀ ಉದ್ಘಾಟಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ. ಓಂಕಾರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ತಾಲ್ಲೂಕು ಸಂಯೋಜಕ ಚಂದ್ರಕಲಾ, ಚಾಂದಿನಿ ಕಿರಣ್, ಮೇಲ್ವಿಚಾರಕರಾದ ಬಿ.ಎನ್. ಪ್ರೇಮ, ಗೌರಮ್ಮ ಎಣ್ಣಿ, ನಂದಿನಿ ಮತ್ತಿತರರು ಪಾಲ್ಗೊಂಡಿದ್ದರು.