ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನ

ಗದಗ,ಮಾ22: ತಾಲೂಕಿನ ಕುರ್ತಕೋಟಿ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ “ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ / ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ” ಅಭಿಯಾನದಡಿ ಕಾಯಕ ಬಂಧುಗಳ, ಸ್ವಸಹಾಯ ಸಂಘಗಳ ಸದಸ್ಯರ ಸಭೆ ನಡೆಸಲಾಯಿತು.

ಈ ವೇಳೆ ತಾಲೂಕ ಪಂಚಾಯತ ಗದಗ ಇ ಓ ಮಾಣಿಕರಾವ್ ಪಾಟೀಲ್ ಏಪ್ರೀಲ್ 1 ರಿಂದ ಕೂಲಿಕಾರರಿಗೆ ಕೆಲಸ ನೀಡಲಾಗುತ್ತಿದ್ದು, ಕಾಯಕ ಬಂಧುಗಳು ಕೂಲಿಕಾರರಿಂದ ನಮೂನೆ 6 ಸಂಗ್ರಹಿಸಬೇಕು. ಕಳೆದ ವರ್ಷಕ್ಕಿಂತ ಈ ವರ್ಷ ಬೇಗನೆ ಕೆಲಸ ನೀಡುವ ಮೂಲಕ ಗುಳೆ ತಪ್ಪಿಸಿ ಸ್ಥಳಿಯವಾಗಿ ಕೆಲಸ ನೀಡಲಾಗುತ್ತಿದೆ ಎಂದರು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಕೂಲಿಕಾರರಿಗೆ ಉದ್ಯೋಗ ಕೊಡಲಿದ್ದು, ತಾವುಗಳು ತಮ್ಮ ಕೂಲಿಕಾರರ ಆಧಾರ ಸಂಖ್ಯೆಗೆ ಬ್ಯಾಂಕ್ ಖಾತೆ ಸಂಖ್ಯೆ ಲಿಂಕ್ ಹಾಗೂ ಉದ್ಯೋಗ ಚೀಟಿ ಓಅPI ಲಿಂಕ್ ಕಡ್ಡಾಯವಾಗಿ ಮಾಡಿಸಬೇಕು. ಕೆಲಸದ ಸ್ಥಳಗಳಲ್ಲಿ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ, ನೆರಳು,ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಬಾರಿ ಕೂಲಿಕಾರರು ಕೆಲಸದ ಸ್ಥಳದಲ್ಲಿ ಮಕ್ಕಳನ್ನು ಕರೆತರಬಾರದು ಅದಕ್ಕಾಗಿ ಆರು ತಿಂಗಳಿಂದ ಮೂರು ವರ್ಷದ ಮಕ್ಕಳಿಗೆ ನಮ್ಮ ಗ್ರಾಮ ಪಂಚಾಯತಿಯಿಂದ ಕೂಸಿನ ಮನೆ ಆರಂಭಮಾಡಿದ್ದು,ತಾವುಗಳು ತಮ್ಮ ಮಕ್ಕಳನ್ನು ಅಲ್ಲಿಯೇ ಬಿಟ್ಟಿ ಕೆಲಸಕ್ಕೆ ಹೋಗಬೇಕು ಎಂದರು.

ಸಹಾಯಕ ನಿರ್ದೇಶಕರಾದ (ಗ್ರಾಮೀಣ ಉದ್ಯೋಗ) ಕುಮಾರ್ ಪೂಜಾರ್ ಮಾತನಾಡಿ ಕೆಲಸದ ಸ್ಥಳದಲ್ಲಿ ಕೂಲಿಕಾರರ ಹಾಜರಾತಿಯನ್ನು ಎರಡು ಹಂತದಲ್ಲಿಓಒಒS ಆ್ಯಪ್ ನಲ್ಲಿ ಸೆರೆಹಿಡಿಯಬೇಕು.ಕೂಲಿಕಾರರಿಗೆ ಯಾವುದೇ ತೋಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಲೆಕ್ಕಧಿಕಾರಿ, ಗ್ರಾ.ಪಂ ಪಿಡಿಒ. ನರೇಗಾ ಸಿಬ್ಬಂದಿಗಳು ಹಾಗೂ ಕಾಯಕ ಬಂಧುಗಳು, ಸ್ವಸಹಾಯ ಸಂಘದ ಸದಸ್ಯರು, ಮತ್ತು ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.