ಉನ್ನತ ಗುರಿಯಿಂದ ಯಶಸ್ಸು ಸಾಧ್ಯ


ಸಂಜೆವಾಣಿ ವಾರ್ತೆ
ಬಳ್ಳಾರಿ, ಮೇ.31: ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಮುನ್ನೆಡೆದಾಗ ಯಶಸ್ಸುಗಳಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ತಾಲ್ಲೂಕಿನ ಸಂಜೀವರಾಯನಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಪ್ರತಿ ದಿನ ಶಾಲೆಗೆ ಬಂದು ಅಂದಿನ ಪಾಠ ಅಂದೇ ಕಲಿತರೆ ಕಲಿಕೆ ಉತ್ತಮವಾಗುತ್ತದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಬಸಮ್ಮ ಹೊನ್ನೂರಸ್ವಾಮಿ ಕನ್ನಡ ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಿ ಮಕ್ಕಳಿಗೆ ಶುಭಕೋರಿದರು.
ಶಿಕ್ಷಕರಾದ ಬಸವರಾಜ, ದಿಲ್ಷಾದ್ ಬೇಗಂ, ಮೋದಿನ್ ಸಾಬ್, ಚನ್ನಮ್ಮ, ಸುಮತಿ, ಸುಧಾ, ವೈಶಾಲಿ, ಉಮ್ಮೇಹಾನಿ,ಶಶಮ್ಮ,ಅಂಗನವಾಡಿ ಕಾರ್ಯಕರ್ತೆಯರಾದ ಪದ್ಮಾವತಿ, ನಿಂಗಮ್ಮ, ಮುಂತಾದವರು ಉಪಸ್ಥಿತರಿದ್ದರು.