ಉನ್ನತ ಮಟ್ಟದ ತನಿಖೆಗೆ ವಾಟಾಳ್ ಒತ್ತಾಯ

ಚಾಮರಾಜನಗರ, ಮೇ.3- ಜಿಲ್ಲೆಯಲ್ಲಿ 24 ಗಂಟೆಯಲ್ಲಿ 24 ಮಂದಿ ಮೃತಪಟ್ಟಿರುವ ಹೊಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಿರಂತರ ಸಾವು-ನೋವುಗಳ ಸಂಪೂರ್ಣ ಜವಾಬ್ದಾರಿಯನ್ನು ಯಡಿಯೂರಪ್ಪ ಹೊರಬೇಕು. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು. ಅಷ್ಟೇ ಅಲ್ಲದೇ ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.
ಜಿಲ್ಲಾಡಳಿತ ಸಂಪೂರ್ಣ ಸತ್ತುಹೋಗಿದೆ. ಜಿಲ್ಲಾಧಿಕಾರಿಗಳು ಬೇಜವಾಬ್ದಾರಿತನದಿಂದ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಮೃತರ ಕುಟುಂಬದ ದುಃಖದಲ್ಲಿ ತಾನು ಭಾಗಿಯಾಗಿರುವುದಾಗಿ ಸೋಂಕಿತರ ಸಾವಿಗೆ ಕಂಬನಿ ಮಿಡಿದಿದ್ದಾರೆ.