ಕಲಬುರಗಿ,ಜೂ.18: ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಹೈದ್ರಾಬಾದಿನಿಂದ ರಸ್ತೆ ಮಾರ್ಗವಾಗಿ ಜೂನ್ 19 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಕ್ಯಾಂಪಸ್ ಆವರಣಕ್ಕೆ ಆಗಮಿಸುವರು.
ಬೆಳಿಗ್ಗೆ 11.30 ಗಂಟೆಗೆ ಗುಲಬರ್ಗಾ ವಿ.ವಿ.ಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆಯುವ ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವದಲ್ಲಿ ಭಾಗವಹಿಸಿ, ಮಧ್ಯಾಹ್ನ 2 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದ್ ಗೆ ತೆರಳಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.