ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಯನೀಯ ಸೋಲು: ಬಿಎಸ್‌ವೈ

ಮಂಗಳೂರು, ನ.೫- ರಾಜ್ಯದಲ್ಲಿ ಈಗಾಗಲೇ ನಡೆದ ಶಿರಾ ಹಾಗೂ ಆರ್ ಆರ್ ನಗರದ ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ದಯಾನೀಯವಾಗಿ ಸೋಲನು
ಭವಿಸಲಿದೆ ಎಂದು ಮಂಗಳೂರಿನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಇಂದು (ಗುರುವಾರ) ನಗರದಲ್ಲಿ ಬಿಜೆಪಿ ಕಾರ್ಯಕಾರಣಿ ನಡೆಯಲಿದ್ದು, ಇದರಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಮಂಗಳೂರಿಗೆ ಸಿಎಂ ಯಡಿಯೂರಪ್ಪ ಬುಧವಾರ ರಾತ್ರಿ ೮ ಗಂಟೆಯ ಸುಮಾರಿಗೆ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಸಿದ್ದರಾಮಯ್ಯ ಇನ್ನಾದ್ರೂ ಬೇಜವಾಬ್ದಾರಿ ಹೇಳಿಕೆ ನಿಲ್ಲಿಸಬೇಕು. ಜವಾಬ್ದಾರಿಯುತ ಹೇಳಿಕೆ
ಯನ್ನು ವಿಪಕ್ಷ ನಾಯಕರು ನೀಡಲಿ ಎಂದು ಮನವಿ ಮಾಡಿದ್ದಾರೆ.