ಉಪಚುನಾವಣೆ ಗೆಲುವು ಬಿಜೆಪಿ ಕಾರ್ಯಕರ್ತರ ಗೆಲುವು : ಮೇಯರ್ ಬಿ.ಜಿ.ಅಜಯ್ ಕುಮಾರ್


ದಾವಣಗೆರೆ.ನ.೧೧; ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ನಡೆಯುತ್ತಿರುವ ಹಲವು ಜನಪರ ಅಭಿವೃದ್ಧಿ ಕೆಲಸಗಳು ನೋಡಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಜಿ ಅವರ ನಾಯಕತ್ವದ ಮೇಲೆ ವಿಶ್ವಾಸವಿಟ್ಟು ಬಿಹಾರದ ಮಹಾ ಜನತೆ ಎನ್‌ಡಿಎ ನೇತ್ರತ್ವದ ಸರ್ಕಾರಕ್ಕೆ ಆಶೀರ್ವಾದ ಮಾಡಿದ್ದಾರೆ. ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ನವರ ಕೈ ಇನ್ನಷ್ಟು ಬಲವಾಗಿದ್ದು, ಇನ್ನೂ ಎರಡುವರೆ ವರ್ಷಗಳ ಕಾಲ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನೆಡಸಲಿದ್ದಾರೆ. ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿಗೆ ಮತ ನೀಡಿದ ಮತದಾರರಿಗೆ, ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರಿಗೆ, ಪಕ್ಷದ ನಾಯಕರಿಗೆ ಹಾಗೂ ಜಯಗಳಿಸಿದ ಅಭ್ಯರ್ಥಿಗಳಿಗೆ ಮೇಯರ್ ಬಿ.ಜಿ. ಅಜಯ್ ಕುಮಾರ್ ಅಭಿನಂದನೆಗಳನ್ನು ಸಲ್ಲಿಸಿದರು.
ಪೋಟೋ-೨