ಉಪಮುಖ್ಯಮಂತ್ರಿಗಳ ಪ್ರವಾಸ

ಕಲಬುರಗಿ,ಡಿ.30:ರಾಜ್ಯದ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಬೆಂಗಳೂರಿನಿಂದ ಸ್ಟಾರ್ ಏರ್ ವಿಮಾನದ ಮೂಲಕ 2021ರ ಜನವರಿ 1 ರಂದು ಬೆಳಿಗ್ಗೆ 9.45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ನಂತರ ಬೆಳಿಗ್ಗೆ 10 ಗಂಟೆಗೆ ನಗರದ ಭಾರತೀಯ ಜನತಾ ಪಕ್ಷದ ಕಚೇರಿಗೆ ಭೇಟಿ ನೀಡುವರು. ಬೆಳಿಗ್ಗೆ 11 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಏರ್ಪಡಿಸಲಾದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಅಂದು ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಲ್ಲಿ ಕೋವಿಡ್ 19 ಸೊಂಕು ನಿಯಂತ್ರಣದ ಕುರಿತು ತೆಗೆದುಕೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಕಾಮಗಾರಿಗಳನ್ನು ಪರಿಶೀಲಿಸುವರು. ನಂತರ ಮಧ್ಯಾಹ್ನ 3.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣಿಸುವರು.