ಉಪಸಮರ ಕೈಗೆ ಗೆಲುವು

ಬೆಂಗಳೂರು,ನ.೮- ಆರ್‌ಆರ್ ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆರ್‌ಆರ್ ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ ಎನ್ನುವ ಚುನಾವಣೋತ್ತರ ಸಮೀಕ್ಷೆ ನಂತರ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು ಯಾರು ಏನೇ ಹೇಳಿದರೂ ಕಾಂಗ್ರೆಸ್ ಅಭ್ಯರ್ಥಿಗಳು ಎರಡೂ ಕಡೆ ಜಯಗಳಿಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಎರಡೂ ಕ್ಷೇತ್ರಗಳಲ್ಲಿ ಉತ್ತಮವಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದೆ ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಬಿಹಾರ ಚುನಾವಣಾ ಸಮೀಕ್ಷೆ ಕುರಿತಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು, ಲಾಲು ಪುತ್ರ ತೇಜಸ್ವಿಯಾದವ್ ತೇತೃತ್ವದ ಮಹಾಘಟ ಬಂಧನ್ ಜಯಗಳಿಸಲಿದೆ ಎಂದಿದ್ದಾರೆ.
ತೇಜಸ್ವಿ ಆಯೋಜಿಸಿದ್ದ ಸಭೆಗಳಲ್ಲಿ ಹೆಚ್ಚು ಜನ ಸೇರುತ್ತಿದ್ದರು. ನಿತೀಶ್ ಕುಮಾರ್ ಅವರ ಸಭೆಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರಲಿಲ್ಲ. ಇದರಿಂದ ನಿತೀಶ್ ಕುಮಾರ್ ಅವರ ಗೆಲುವು ಸಾಧ್ಯವಿಲ್ಲ.
ಬಿಹಾರ ಜನತೆ ಈ ಬಾರಿ ನಿತೀಶ್ ಕುಮಾರ್‌ಅವರ ಆಡಳಿತ ಕೊನೆಗಾಣಿಸಲಿದ್ದಾರೆ ಎಂದ ಅವರು, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ.