ಉಪಾಧ್ಯಕ್ಷರಾಗಿ ಆಯ್ಕೆ


ಬ್ಯಾಡಗಿ,ಜ.4: ಹಾವೇರಿ ಜಿಲ್ಲಾ ಎಸ್.ಟಿ.ಮೋರ್ಚಾ ಬಿಜೆಪಿಯ ಉಪಾಧ್ಯಕ್ಷರಾಗಿ ತಾಲೂಕಿನ ಘಾಳಪೂಜಿ ಗ್ರಾಮದ ಯುವ ಮುಖಂಡ ಪ್ರಕಾಶ ಕಳ್ಳಿಮನಿ ಆಯ್ಕೆಯಾಗಿದ್ದಾರೆ.
ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಅವರ ನಿವಾಸದಲ್ಲಿ ಹಾವೇರಿ ಜಿಲ್ಲಾ ಎಸ್.ಟಿ.ಮೋರ್ಚಾ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಕಾಶ ಕಳ್ಳಿಮನಿ ಅವರಿಗೆ ಜಿಲ್ಲಾಧ್ಯಕ್ಷ ಶಿವಾನಂದ ಯಮುನಕ್ಕನವರ ಅವರು ಆದೇಶ ಪತ್ರ ನೀಡಿ ಪಕ್ಷದ ಸಂಘಟನೆಗೆ ಶ್ರಮಿಸಲು ಸೂಚಿಸಿದರು.
ಈ ಸಂಧರ್ಭದಲ್ಲಿ ತಾಪಂ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಶಾಂತಪ್ಪ ದೊಡ್ಡಮನಿ, ಎಪಿಎಂಸಿ ಮಾಜಿ ಅಧ್ಯಕ್ಷ ವೀರಭದ್ರಪ್ಪ ಗೊಡಚಿ, ಮಲ್ಲೂರ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಮೇಗಳಮನಿ, ಶಾಸಕರ ಆಪ್ತ ಕಾರ್ಯದರ್ಶಿ ಬಸವರಾಜ ಕುಲಕರ್ಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.