ಉಪ್ಪಾರ ಸಮಾಜದ ೫ ಜನರಿಗೆ ಬಿಜೆಪಿ ಟಿಕೆಟ್ ನೀಡಲಿ

ರಾಯಚೂರು,ಏ.೪- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ೫ ಜನ ಉಪ್ಪಾರ ಸಮಾಜದವರಿಗೆ ಟಿಕೆಟ್ ನೀಡಬೇಕು ಎಂದು ಜಿಲ್ಲಾ ಭಗೀರಥ ಉಪ್ಪಾರ ಸಮಾಜ ಸಂಘದ ಪ್ರಧಾನ ಕಾರ್ಯದರ್ಶಿ ಆದಿರಾಜ ಆದೋನಿ ಒತ್ತಾಯಿಸಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಉಪ್ಪಾರ ಸಮಾಜದವರು ಸುಮಾರು ೩೫ ರಿಂದ ೪೦ ಲಕ್ಷ ಜನಸಂಖ್ಯೆ ಇದ್ದಾರೆ. ಇದರಲ್ಲಿ ೩೩ ಕ್ಷೇತ್ರದಲ್ಲಿ ನಮ್ಮ ಸಮಾಜದ ನಿರ್ಣಾಯಕ ಪಾತ್ರ ವಹಿಸುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ೨೨೪ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಐದು ಕ್ಷೇತ್ರದಲ್ಲಿಯಾದರೂ ಸಮಾಜದವರಿಗೆ ಟಿಕೆಟ್ ನೀಡಬೇಕು. ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರದ ಕೆ ಕರಿಯಪ್ಪ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು. ಅರಬಾವಿ ಕ್ಷೇತ್ರದಿಂದ ಮಲ್ಲಿಕಾರ್ಜುನ ಚೌಕಾಸಿ,ಗೋಕಾಕ್ ಕ್ಷೇತ್ರದಿಂದ ಸದಾಶಿವ ಗುದಾಗ್ ಗೊಳ್ , ಕುಷ್ಟಗಿಯಿಂದ ಪ್ರಭಾಕರ್ ಚಿನಿ ಹಾಗೂ ಕಡೂರ್ ಕ್ಷೇತ್ರದಿಂದ ಗಿರೀಶ್ ಉಪ್ಪಾರ ಇವರಿಗೆ ಬಿಜೆಪಿ ಟಿಕೇಟ್ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ದೇವಣ್ಣ ನವಲಕಲ್, ಎನ್. ಬಗ್ಗಾರೆಡ್ಡಿ, ಮಾಣಿಕಪ್ಪ ಸೇರಿದಂತೆ ಇತರರು ಇದ್ದರು.