
;
ಮಂಗಳೂರು, ಏ.18- ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ನೆಟ್ಟಣ ಸಮೀಪ ಇಂದು ಮಧ್ಯಾಹ್ನ ತೂಫಾನ್ ವಾಹನ ಮತ್ತು ಆಲ್ಟೊ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಸುಬ್ರಹ್ಮಣ್ಯ– ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಈ ಅಪಘಾತ ಆಲ್ಟೊ ಕಾರಿನಲ್ಲಿದ್ದ ಇಬ್ಬರು ಪುರುಷರು, ಒಬ್ಬ ಮಹಿಳೆ ಮತ್ತು ಒಂದು ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಮೃತಪಟ್ಟವರು ಮೃತರು ಬೇಲೂರು ಮೂಲದವರಾಗಿದ್ದು, ಅವರ ವಿವರಗಳನ್ನು ಇನ್ನಷ್ಟೇ ಕಲೆಹಾಕಬೇಕಿದೆ. ಆಲ್ಟೊ ಕಾರು ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿತ್ತು ಎಂದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪಘಾತದಿಂದ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ.