ಉಪ್ಪಿ ಅಭಿಮಾನಿಯ `ನಾನೇ ಹೀರೋ’ ಆರಂಭ

ಉಪೇಂದ್ರ ಅಭಿಮಾನಿಯೊಬ್ಬ ನಟಿಸುತ್ತಿರುವ ಹಾಸ್ಯಪ್ರಧಾನ ಕಥಾಹಂದರ ಹೊಂದಿರುವ ಚಿತ್ರ “ನಾನೇ ಹೀರೋ” ಚಿತ್ರ ಆರಂಭಗೊಂಡಿದೆ.

ಆರ್.ಕೆ.ಗಾಂಧಿ  ನಿರ್ದೇಶನದ ಚಿತ್ರವನ್ನು ಹಗದೂರು ಅಶೋಕ್ ರೆಡ್ಡಿ, ಮುತ್ಸಂದ್ರ ವೆಂಕಟರಾಮಯ್ಯ,  ಸತ್ಯವಾನಾಗೇಶ್ ನಿರ್ಮಿಸುತ್ತಿದ್ದಾರೆ.ಚಿಂತಾಮಣಿ ತಾಲ್ಲೂಕಿನ ನಲ್ಲಗುಟ್ಲಪಲ್ಲಿ ಸಪ್ತಮಾತೃಕೆಯರ ಸನ್ನಿಧಾನದಲ್ಲಿ ಚಿತ್ರ ಸೆಟ್ಟೇರಿದೆ.ಹಿರಿಯ ನಿರ್ಮಾಪಕ ಬಿ. ಎನ್. ಎಸ್  ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಲಕ್ಷ್ಮಿನಾರಾಯಣ ರೆಡ್ಡಿ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು.

ಉಪ್ಪಿ ಅಭಿಮಾನಿಯೊಬ್ಬ ಚಿತ್ರರಂಗದಲ್ಲಿ ನಾಯಕನಾಗಬೇಕೆಂದು ಹೊರಟು, ಅದಕ್ಕಾಗಿ ಆತ ಏನೆನೆಲ್ಲಾ ಸಾಹಸ ಮಾಡುತ್ತಾನೆ ಎಂಬ  ಕಥಾಹಂದರ ಚಿತ್ರದಲ್ಲಿದೆ. ಸಿನಿಮಾ ಕೆಲವರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಆ ಭಯಕ್ಕೆ ಕಾರಣಗಳೇನು ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು ಎಂದಿದ್ದಾರೆ  ನಿರ್ದೇಶಕ ಆರ್.ಕೆ. ಗಾಂಧಿ .

ಚಿತ್ರದಲ್ಲಿ ಹಗದೂರು ಅಶೋಕ್ ರೆಡ್ಡಿ, ಶೋಭ, ಶೋಭರಾಜ್, ಶಶಿಕುಮಾರ್.ಅನ್ಸರ್ ಬಾಬು, ಮಹಾಂತೇಶ ವಿರೂಪಾಕ್ಷಿ ಸಮಯ್ ಮುಂತಾದವರು ನಟಿಸುತ್ತಿದ್ದಾರೆ. ಪ್ರಮೋದ್ ಭಾರತೀಯ  ಛಾಯಾಗ್ರಹಣ, ಎಂ. ಎಲ್. ರಾಜ ಸಂಗೀತವಿದೆ.

ಹೊಸಕೋಟೆ, ಚಿಂತಾಮಣಿ ಮತ್ತು ಗಾಂಧಿನಗರದ ಹಲವು ಸಿನಿಮಾ ಕಛೇರಿಗಳಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ.