ಉಪ‌ಸಭಾಪತಿ ಆತ್ಮಹತ್ಯೆ ಉನ್ನತ ಮಟ್ಟದ ತನಿಖೆಗೆ ಆದೇಶ

ನವದೆಹಲಿ, ಡಿ.30- ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

ಈ ಸಂಬಂಧಿಸಿದ ಪ್ರತ್ಯೇಕ ಸಂಸ್ಥೆ ಯಿಂದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅವರು ಸೂಚಿಸಿದ್ದಾರೆ.

ಉಪ ಸಭಾಪತಿ ಧರ್ಮೇಗೌಡ ಅವರು ಮೊನ್ನೆ ರಾತ್ರಿ ಬಾಣಾವರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪರಸ್ಪರ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು.

ಈ ಹಿನ್ನೆಲೆಯಲ್ಲಿ ಉಪ ಸಭಾಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ತಿಳಿಯಲು ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ತನಿಖೆಗೆ ಆದೇಶಿಸಿದ್ದಾರೆ