ಉಪ ಚುನಾವಣೆ ಶಾಂತಿಯುತ ನಡೆಯಲು ಸಹಕಾರ ಕೋರಿದ ಜಿಲ್ಲಾಧಿಕಾರಿಗಳು

ಬೀದರ ಎ.1 : ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು ಶಾಂತಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಸ್ಮಾನಬಾದ್, ಲಾತೂರ, ನಾಂದೇಡ ಮತ್ತು ಸಂಗಾರೆಡ್ಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಇತ್ತೀಚೆಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.
ಉಪ ಚುನಾವಣೆ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಲಾಗಿದೆ. ಜೊತೆಗೆ ವಿಶೇಷ ತಂಡವನ್ನು ರಚಿಸಿದ್ದು, ವಸ್ತು ಸಾಗಣೆ, ಲೆಕ್ಕ ವಿಲ್ಲದ ಹಣ ಸಾಗಣೆ, ಮದ್ಯೆ ಸಾಗಣೆ ತಡೆಗೆ ವಿಶೇಷ ನಿಗಾ ವಹಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹೇಳಿದರು.
ಈಗ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಆಯುಧಗಳನ್ನು ಕಾನೂನು ಪ್ರಕಾರ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಮತದಾನವು ಶಾಂತಿಯುತವಾಗಿ ನಡೆಯಬೇಕು. ಮತದಾನ ಕೇಂದ್ರದ ಸುತ್ತಲೂ ಅಪರಿಚಿತ ವ್ಯಕ್ತಿಗಳು ಸುಳಿಯದಂತೆ ಕಟ್ಟೆಚ್ಚರ ವಹಿಸಬೇಕು ಎಂದರು.
ಮತಕ್ಷೇತ್ರದ ಮತದಾರರನ್ನು ಹೊರತುಪಡಿಸಿ ಮತದಾನ ದಿನದ 72 ಗಂಟೆಗಳ ಮೊದಲು ಅಪರಿಚಿತ ವ್ಯಕ್ತಿಗಳು ಮತಗಟ್ಟೆಗಳಲ್ಲಿ ಸುತ್ತಾಡದಂತೆ ನಿಷೇಧ ಕ್ರಮ ವಹಿಸಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ರುದ್ರೇಶ ಘಾಳಿ, ಪೆÇ್ರಬೇಷ್ನರಿ ಕೆ.ಎ.ಎಸ್ ಅಧಿಕಾರಿಗಳಾದ ವೆಂಕಟಲಕ್ಷ್ಮೀ, ಅಶ್ವಿನ್ ಅವರು ಉಪಸ್ಥಿತರಿದ್ದರು.