ಉಪ ಮುಖ್ಯಮಂತ್ರಿಗಳು ಭರವಸೆ ನೀಡಿರುವಂತೆ ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಸಲು ಒತ್ತಾಯ

ಬೀದರ:ಫೆ.13:ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕಾರಂಜಾ ಸಂತ್ರಸ್ತರ ನ್ಯಾಯಯುತವಾದ ಬೇಡಿಕೆ ಈಡೇರಿಸಲು ಉಪ ಮುಖ್ಯಮಂತ್ರಿಗಳು ಮತ್ತು ನೀರಾವರಿ ಮಂತ್ರಿಗಳು ಆದ ಡಿ ಕೆ ಶಿವಕುಮಾರ್ ರವರು ಬೀದರ ಜಿಲ್ಲೆಯ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಮತ್ತು ಸಚಿವರಾದ ರಹೀಂ ಖಾನ್ ಸೇರಿದಂತೆ ಬೀದರ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಕಾರಂಜಾ ರೈತ ಸಂತ್ರಸ್ತರ ಮುಖಂಡರ ಅಧಿಕೃತ ಸಭೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಿ ಕಾರಂಜಾ ಸಂತ್ರಸ್ತರಿಗೆ ವೈಜ್ಞಾನಿಕ ಮಾನದಂಡದಂತೆ ಸಮರ್ಪಕ ಪರಿಹಾರ ನೀಡುವ ಬಗ್ಗೆ ಉಪ ಮುಖ್ಯಮಂತ್ರಿಗಳು ಭರವಸೆ ನೀಡಿರುವಂತೆ ಪ್ರಸ್ತುತ ಅಧಿವೇಶನದ ಸಂದರ್ಭದಲ್ಲಿ ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಸಲು ಲಕ್ಷ್ಮಣ ದಸ್ತಿಯವರ ನೇತೃತ್ವದಲ್ಲಿ ನಡೆದ ನೂರಾರು ರೈತ ಸಂತ್ರಸ್ತರ ಸಭೆಯಲ್ಲಿ ಒತ್ತಾಯಿಸಲಾಯಿತು.
ಇಂದು ಬೀದರ ನಗರದ ಹೊರ ವಲಯದಲ್ಲಿ ಬರುವ ಅಶೊದೇವ ಹೋಟೆಲ್ ನಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತ ರಕ್ಷಣಾ ಸಮಿತಿ ಮತ್ತು ಬೀದರ ಸಮಗ್ರ ಅಭಿವೃದ್ಧಿ ಜಂಟಿ ಕ್ರಿಯಾ ಸಮಿತಿ ಸಭೆ ಹಿರಿಯ ಹೋರಾಟಗಾರರಾದ ಲಕ್ಷ್ಮಣ ದಸ್ತಿಯವರ ನೇತೃತ್ವದಲ್ಲಿ ನಡೆಯಿತು.ಈ ಸಭೆಯ ಅಧ್ಯಕ್ಷತೆ ವಹಿಸಿದ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ ಹುಚಕನಳ್ಳಿ ಸಂತ್ರಸ್ತರ ಬೇಡಿಕೆ ಈಡೇರಿಕೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ನಿರಂತರವಾಗಿ ಭೇಟಿ ನೀಡಿ ಮನವರಿಕೆ ಮಾಡಲಾಗಿದೆ ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಪ್ರಸ್ತುತ ಅಧಿವೇಶನದ ಸಂದರ್ಭದಲ್ಲಿ ಕಾರಂಜಾ ಸಂತ್ರಸ್ತರ ಬೇಡಿಕೆಯ ಕುರಿತು ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆದಷ್ಟು ಶೀಘ್ರ ಬೆಂಗಳೂರಿನಲ್ಲಿ ಸಭೆ ನಡೆಸುವ ಬಗ್ಗೆ ಉಸ್ತುವಾರಿ ಸಚಿವರು ಭರವಸೆ ನೀಡಿರುವಂತೆ ಸಂತ್ರಸ್ತರ ಬೇಡಿಕೆ ಈಡೇರಿಕೆಯ ಬಗ್ಗೆ ಪ್ರಸ್ತುತ ಅಧಿವೇಶನದ ಸಂದರ್ಭದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಮತ್ತು ಸಚಿವರಾದ ರಹೀಂ ಖಾನ್ ಹಾಗೂ ಶಾಸಕರಾದ ಶೈಲೇಂದ್ರ ಬೆಲ್ದಾಳೆ, ರಘುನಾಥರಾವ ಮಲ್ಕಾಪುರೆ, ಅರವಿಂದ ಕುಮಾರ ಅರಳಿ,ಸಿದ್ದು ಪಾಟೀಲ, ಶರಣು ಸಲಗರ,ಭೀಮರಾವ ಪಾಟೀಲ, ಚಂದ್ರಶೇಖರ ಪಾಟೀಲ,ಪ್ರಭು ಚವ್ಹಾಣರವರು ಜಿಲ್ಲೆಯ ಈ ಜ್ವಲಂತ ಸಮಸ್ಯೆಯ ಪರಿಹಾರದ ಬಗ್ಗೆ ಸಂಘಟಿತ ರಾಜಕೀಯ ಇಚ್ಛಾಶಕ್ತಿ ವ್ಯಕ್ತಪಡಿಸಲು ಸಭೆಯು ಮೂಲಕ ಒತ್ತಾಯಿಸಲಾಯಿತು.ಈ ಸಭೆಯಲ್ಲಿ ಡಾ.ಅಶೋಕ ನಾಗೂರೆ,ರಾಜಪ್ಪ, ಕೂಸಮ , ಪದಮಾನಂದ ಗಾಯಕವಾಡ , ಚಂದ್ರಕಾಂತ ವಡ್ಡೆ, ಶಿವಕುಮಾರ ನೌಬಾದ, ರಾಜಕುಮಾರ ರಂಜೋಳ, ಈಶ್ವರಯ್ಯ ಸ್ವಾಮಿ, ಬಸವರಾಜ ಹಿಂದಾ,ಸಂಗಾರೆಡ್ಡಿ ಅವರಾದ, ಮಹೇಶ ಹಲಬರ್ಗಾ ಸೇರಿದಂತೆ ಅನೇಕರು ಮಾತ್ನಾಡಿದರು ಈ ಮಹತ್ವದ ಸಭೆಗೆ ನೂರಾರು ಜನ ಸಂತ್ರಸ್ತರು ಉಪಸ್ಥಿತರಿದ್ದರು.