ಉಮೇದುವಾರಿಕೆ ಸಲ್ಲಿಸಿದ ಎಚ್.ಸಿ ಇಕ್ಬಾಲ್ ಹುಸೇನ್

ರಾಮನಗರ,ಏ.೧೮- ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ. ಇಕ್ಬಾಲ್ ಹುಸೇನ್ ಸಾವಿರಾರು ಮುಖಂಡರ ಜೊತೆಗೂಡಿ ಮಿನಿ ವಿಧಾನಸೌಧ ಮುಂಭಾಗಕ್ಕೆ ಬಂದು ನಾಮಪತ್ರ ಸಲ್ಲಿಸಿದರು.
ಮಾಜಿ ಶಾಸಕ ಕೆ.ರಾಜು, ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜು, ಕೆಎಸ್‌ಐಸಿ ಮಾಜಿ ಅಧ್ಯಕ್ಷ ಸಯ್ಯದ್ ಜಿಯಾವುಲ್ಲಾ, ಎಂಇಐ ಮಾಜಿ ಅಧ್ಯಕ್ಷ ಕೆ.ಶೇಷಾದ್ರಿ ಅವರಿಗೆ ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆಗೂ ಮೊದಲು ನಗರದ ಶಕ್ತಿದೇವತೆ ಶ್ರೀಚಾಮುಂಡೇಶ್ವರಿ ಅಮ್ಮನವರ ದೇವಾಲಯ, ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಡಿಕೆ ಬ್ರದರ್ಸ್ ಅಣತಿಯಂತೆ ಅಬ್ಬರ, ಜನಸಾಗರ, ರ್ಯಾಲಿ ನಡೆಸದೆ ಕೇವಲ ಪ್ರಮುಖ ಮುಖಂಡರ ಜೊತೆಗೂಡಿ ನಾಮಪತ್ರ ಸಲ್ಲಿಕೆ ಮಾಡಿದ್ದು ವಿಶೇಷವಾಗಿತ್ತು.
ಉಮೇಧುವಾರಿಕೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಜನತೆ ಬಯಸುತ್ತಿದ್ದಾರೆ. ಎಲ್ಲೆಡೆ ಕಾಂಗ್ರೆಸ್ ವಾತಾವರಣ ನಿರ್ಮಾಣವಾಗಿದೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಿಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
ರಾಮನಗರ ಕ್ಷೇತ್ರದಿಂದ ಆಯ್ಕೆ ಬಯಸಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಜನತೆ ಆರ್ಶೀವಾದ ಮಾಡಲಿದ್ದಾರೆ. ಎಂಬ ವಿಶ್ವಾಸ ಇದೆ ಎಂದರು