ಉಮ್ಮತ್ತೂರಿನಲ್ಲಿ ನಾಳೆ ಬಸವ ಪುತ್ಥಳಿ ಅನಾವರಣ, ಧಾರ್ಮಿಕ ಸಭೆ

ಚಾಮರಾಜನಗರ, ಏ.15:- ತಾಲೂಕಿನ ಉಮ್ಮತ್ತೂರು ಗ್ರಾಮದ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಅವರಣದಲ್ಲಿ ಶ್ರೀ ಬಸವೇಶ್ವರ ಪುತ್ಥಳಿ ಉದ್ಗಾಟನಾ ಕಾರ್ಯಕ್ರಮ ಏ. 16 ರಂದು ನಡೆಯಲಿದೆ ಎಂದು ಬಸವ ಪುತ್ಥಳಿ ನಿರ್ಮಾಣ ಸಮಿತಿಯ ಗೌರವ ಅಧ್ಯಕ್ಷರಾದ ಕಲಾವಿದ ಉಮ್ಮತ್ತೂರು ಬಸವರಾಜು ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮಕ್ಕೆ ಪ್ರವೇಶವಾಗುತ್ತಿದ್ದಂತೆ ಶ್ರೀ ಕೊಟ್ಟೂರು ಬಸವೇಶ್ವರರ ದೇವಸ್ಥಾನವಿದ್ದು, ದೇವಸ್ಥಾನದ ಅವರಣದಲ್ಲಿ ಬಸವೇಶ್ವರ ಬೃಹತ್ ಪುತ್ಥಳಿಯನ್ನು ಬಸವ ಪುತ್ಥಳಿ ನಿರ್ಮಾಣ ಸಮಿತಿ, ಉಮ್ಮತ್ತೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಸಹಕಾರದೊಂದಿಗೆ ನಿರ್ಮಾಣ ಮಾಡಲಾಗಿದೆ ಎಂದರು.
ಶ್ರೀ ಬಸವೇಶ್ವರ ಪುತ್ಥಳಿ ಅನಾವರಣ ಹಾಗೂ ಧಾರ್ಮಿಕ ಸಭೆಯನ್ನು ಏ. 16ರ ಭಾನುವಾರ ಸಾಯಂಕಾಲ 4 ಗಂಟೆಗೆ ಸುತ್ತೂರು ಶ್ರೀ ಶಿವರಾತ್ರಿದೇಶಿ ಕೇಂದ್ರ ಸ್ವಾಮೀಜಿ ಉದ್ಗಾಟನೆ ಮಾಡಲಿದ್ದು, ಹರಗುರು ಚರಮುರ್ತಿಗಳ ಸಮ್ಮುಖದಲ್ಲಿ ಧಾರ್ಮಿಕ ಸಭೆಯನ್ನು ಆಯೋಜನೆ ಮಾಡಲಾಗಿದೆ.
ದಿವ್ಯ ಸಾನಿಧ್ಯವನ್ನು ಕನಕಪುರದ ಶ್ರೀ ಚನ್ನಬಸವಸ್ವಾಮೀಜಿ, ದೇವನೂರು ಮಠದ ಶ್ರೀ ಮಹಾಂತಸ್ವಾಮೀಜಿ, ವಾಟಾಳು ಮಠದ ಶ್ರೀ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ, ಮಲ್ಲನಮೂಲೆ ಮಠದ ಶ್ರೀ ಚನ್ನಬಸವಸ್ವಾಮೀಜೀ, ಮರಳಗವಿ ಮಠದ ಶ್ರೀ ಮುಮ್ಮಡಿ ಶಿವರುದ್ರಸ್ವಮೀಜಿ, ಪಡಗೂರು ಮಠದ ಶ್ರೀ ಶಿವಲಿಂಗೇಂದ್ರಸ್ವಾಮೀಜಿ ವಹಿಸಲಿದ್ದಾರೆ.
ಧಾರ್ಮಿಕ ಸಭೆಯನ್ನು ಸೋಮಹಳ್ಳಿ ಮಠದ ಶ್ರೀ ಸಿದ್ದಮಲ್ಲಸ್ವಾಮೀಜಿ ಉದ್ಘಾಟಿಸಲಿದ್ದು, ಹರವೆ ಮಠದ ಶ್ರೀ ಸರ್ಪಭೂಷಣಸ್ವಾಮೀಜಿ ಅಧ್ಯಕ್ಷತೆ ವಹಿಸುವವರು, ಮುಖ್ಯ ಭಾಷಣಕಾರರಾಗಿ ಮೈಸೂರಿನ ಕುಂದೂರು ಮಠದ ಶ್ರೀ ಶರತ್‍ಚಂದ್ರಸ್ವಾಮೀಜಿ ಆಗಮಿಸಲಿದ್ದಾರೆ. ಅಲ್ಲದೇ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಹರಗುರು ಚರಮೂರ್ತಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ದರ್ಶನಾಶೀರ್ವಾದ ನೀಡಲಿದ್ದಾರೆ ಎಂದು ಅವರು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಸವ ಅನುಯಾಯಿಗಳು, ಎಲ್ಲ ವರ್ಗದ ಮುಖಂಡರು ಹಾಗೂ ಸಾರ್ವಜನಿಕರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಸಮಿತಿಯ ಉಮ್ಮತ್ತೂರು ಬಸವರಾಜು ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಉಮ್ಮತ್ತೂರು ಜಗದೀಶ್, ಜಿಲ್ಲಾ ಬಸವ ಕೇಂದ್ರ ಅಧ್ಯಕ್ಷ ಎಚ್‍ರಿಎಚ್ ಮಹದೇವಸ್ವಾಮಿ, ಸಮಿತಿಯ ನಿರ್ದೇಶಕರಾದ ಫಣೀರಾಜಮೂರ್ತಿ, ಬಾಗಳಿ ಮಲ್ಲೇಶ್, ಇತರರು ಇದ್ದರು.