ಉಳ್ಳಟ್ಟಿಯಲ್ಲಿ ಜಿಲ್ಲಾಧಿಕಾರಿಗಳನಡೆ ಹಳ್ಳಿಕಡೆ

ಲಕ್ಷ್ಮೇಶ್ವರ,ಸೆ.17: ತಾಲೂಕಿನ ದೊಡ್ಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಉಳ್ಳಟ್ಟಿ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಗ್ರಾಮದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಜರುಗಿತು.
ಕಾರ್ಯಕ್ರಮದ ಆರಂಭಕ್ಕೂ ಮುನ್ನ ತಹಸಿಲ್ದಾರ್ ಪರಶುರಾಮ ಸತ್ತಿಗೇರಿ ಅವರು ಗ್ರಾಮದಲ್ಲಿ ಸಂಚರಿಸಿ ನಂತರ ಮಳೆಯಿಂದ ಜಮೀನುಗಳಲ್ಲಿ ನೀರು ನಿಂತು ಬೆಳೆ ನಲುಗುತ್ತಿದ್ದ ಹಾಗೂ ಅಂಗನವಾಡಿಗೆ ಭೇಟಿ ನೀಡಿ ಅಲ್ಲಿ ಪೆÇೀಷಣ ಅಭಿಯಾನಕ್ಕೆ ಚಾಲನೆ ನೀಡಿದರು.
ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಜ್ಯ ಸರ್ಕಾರ ಈ ಮಹತ್ವಾಕಾಂಕ್ಷಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಮುಖಾಂತರ ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳನ್ನು ಒಂದಡೆ ಸೇರಿಸಿ ಆಯಾ ಇಲಾಖೆಗಳ ಸಮಸ್ಯೆಗಳು ಬಗೆಹರಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ಸರ್ಕಾರದ ನಿರ್ದೇಶನದಂತೆ ಕೇವಲ 72 ತಾಸಿನಲ್ಲಿ ಗ್ರಾಮದ 23 ಜನ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಆದೇಶ ಪ್ರತಿಗಳನ್ನು ನೀಡಲಾಗಿದೆ ಎಂದು ಇದಕ್ಕೆ ಕಂದಾಯ ಇಲಾಖೆಯ ಸಿಬ್ಬಂದಿಯ ಚುರುಕಿನ ಕಾರ್ಯವೇ ಕಾರಣ ಎಂದು ಸಿಬ್ಬಂದಿಯನ್ನು ಪ್ರಶಂಶಿಸಿದರು.
ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ಚಂದ್ರಶೇಖರ ಗೌಡ ನರಸಮ್ಮನವರ್ ಅವರು ಪ್ರಾಸ್ತಾವಿಕ ಮಾತನಾಡಿ ಸರಕಾರದ ಈ ಕಾರ್ಯಕ್ರಮದ ಬಗ್ಗೆ ಜನರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ದೊಡ್ಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲಮ್ಮ ಕಟಗಿ ಉಪಾಧ್ಯಕ್ಷ ಚಂದ್ರು ಇಳಿಗೇರ ಸದಸ್ಯರಾದ ನಾನಪ್ಪ ಲಮಾಣಿ ಮಾಲಕ್ಕ ಇಳಿಗೇರ ರವಿ ಗೌಡ ಪಾಟೀಲ್ ನಿಂಗಪ್ಪ ಬಂಕಾಪುರ ಶಂಕರ್ ಗೌಡ್ರು ಪಾಟೀಲ್ ಸಾಕವ್ವ ಲಮಾಣಿ ಕೃಷ್ಣ ಲಮಾಣಿ ಕಂಬಾಯ ನಿರೀಕ್ಷಕ ಬಸವರಾಜ ಕಾತ್ರಾಳ ಸರ್ವೆ ಇಲಾಖೆಯ ಬಿಎನ್ ನಟರಾಜ್ ಸೇರಿದಂತೆ ಅನೇಕರಿದ್ದರು