ಉಸಿರಾಟದ ಸಮಸ್ಯೆ: ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ,ಜ.4- ಉಸಿರಾಟದ ಸೋಂಕಿನ ಸಮಸ್ಯೆಯಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂದಿ ಅವರು ಚಿಕಿತ್ಸೆಗಾಗಿ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ

ಸೋನಿಯಾ ಅವರನ್ನು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಎದೆ ರೋಗ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಅಜಯ್ ಸ್ವರೂಪ್ ಹೇಳಿದ್ದಾರೆ.

ಡಾ ಅರೂಪ್ ಬಸು ಮತ್ತು ಅವರ ತಂಡದ ಆರೈಕೆಯಲ್ಲಿ ಸೋನಿಯಾ ಗಾಂಧಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋನಿಯಾ ಗಾಂಧಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

“ವೈರಲ್ ಉಸಿರಾಟದ ಸೋಂಕಿನ ವೀಕ್ಷಣೆ ಮತ್ತು ಚಿಕಿತ್ಸೆಗಾಗಿ ಸೋನಿಯಾ ಗಾಂಧಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋನಿಯಾ ಅವರು ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆ‌ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ‌ ನಾಯಕರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಶುಭ ಹಾರೈಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಹೋದರ ಮತ್ತು ಪಕ್ಷದ ಸಂಸದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ಯಾತ್ರೆ’ಗೆ ತಾಯಿಯ ಅನಾರೋಗ್ಯದ ಕಾರಣದಿಂದ ಇಂದಿನ ಯಾತ್ರೆಯಲ್ಲಿ ಪ್ರಿಯಾಂಕ ಗಾಂಧಿ ಭಾಗಿಯಾಗಿರಲಿಲ್ಲ ಎಂದು ತಿಳಿಸಲಾಗಿದೆ.

ನಿನ್ನೆ ಪ್ರಿಯಾಂಕಾ ಮತ್ತು ರಾಹುಲ್ ಇಬ್ಬರೂ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಭಾರತ್ ಜೊಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದರು

ನಾಳೆ ಬೆಳಗ್ಗೆ ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ಮಾವಿಕಲದಿಂದ ರಾಹುಲ್ ಯಾತ್ರೆಗೆ ಪ್ರಿಯಾಂಕ ಗಾಂಧಿ ಸೇರಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ