ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ.ಡಿ.೨೩:ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ನಾಳೆ ಬೆಳಿಗ್ಗೆ ಬೆಳಗಾವಿಯಿಂದ ಹೊರಟು ಸಂಜೆ 4 ಗಂಟೆಗೆ ಹರಿಹರ ಪ್ರವಾಸಿ ಮಂದಿರಕ್ಕೆ ಆಗಮಿಸಲಿದ್ದಾರೆ. ಹರಿಹರ ತಾಲ್ಲೂಕು ಮಲೆಬೆನ್ನೂರಿನಲ್ಲಿ ಆಯೋಜಿಸಿರುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಜೆ 6.15 ಕ್ಕೆ ಹರಿಹರದಿಂದ ಕಡೂರು ತಾಲ್ಲೂಕು ಈಶ್ವರಹಳ್ಳಿಗೆ ತೆರಳುವರು ಎಂದು ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.