ಉ.ಪ್ರ ವಿಧಾನಸಭೆ: ನಿಶಾದ್ ಪಕ್ಷದೊಂದಿಗೆ ಬಿಜೆಪಿ ಮೈತ್ರಿ : ದರ್ಮೇಂದ್ರ ಪ್ರಧಾನ್

ಲಕ್ನೋ, ಸೆ.24- ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷ, ನಿಶದ್ ಪಾರ್ಟಿ ಜೊತೆ ಚುನಾವಣಾ ಮೈತ್ರಿ ಮಾಡಿಕೊಂಡಿದೆ.

ಸಂಜಯ್ ನಿಶದ್ ನೇತೃತ್ವದ ನಿರ್ಬಲ್ ಇಂಡಿಯನ್ ಶೋಶಿತ್ ಹಮಾರ ಆಮ್ ದಳ – ನಿಶದ್ ಪಕ್ಷದ ಜತೆಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಾಗಿ ಬಿಜೆಪಿ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಈ ವಿಷಯ ಪ್ರಕಟಿಸಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಘಟಕದ ಅಧ್ಯಕ್ಷರಾದ ಸ್ವತಂತ್ರ ದೇವ್ ಅರೊಂದಿಗೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಧರ್ಮೇಂದ್ರ ಪ್ರಧಾನ್, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುಚ ಉದ್ದೇಶಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ನಿಶದ್ ಪಕ್ಷ ಹಿಂದುಳಿದವರು ಮತ್ತು ಶೋಷಿತರೊಂದಿಗೆ ಗುರುತಿಸಿಕೊಂಡಿದೆ. ಅದರಲ್ಲೂ ಮೀನುಗಾರ ಸಮುದಾಯ ನಿಶಾದ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದು ಇದರಿಂದ ಪಕ್ಷ ಅಧಿಕಾರಕಕ್ಕೆ ತರುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಕಳೆದ ನಾಲ್ಕುವರೆ ವರ್ಷಗಳಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಿಶಾದ್ ಪಕ್ಷದೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಂಡಿರುವ ನೆಲೆಯಲ್ಲಿ ಹಿಂದುಳಿದ ಮತ್ತು ಶೋಷಿತ ಸಮುದಾಯಗಳ‌ ಮತಗಳ ಕ್ರೋಡೀಕರಣಕ್ಕೆ ಸಹಕಾರಿಯಾಗಲಿದೆ ಇದರಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಲು ನೆರವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2022ರ ಆರಂಭದಲ್ಲಿ ಉತ್ತರ ಪ್ರದೇಶ ಪಂಜಾಬ್ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಬಿಜೆಪಿ ಈಗಿನಿಂದಲೇ ತಯಾರಿ ಮಾಡಿಕೊಳ್ಳುವ ಮೂಲಕ ಅಧಿಕಾರ ಹಿಡಿಯುವ ಹರಸಾಹಸ ನಡೆಸಿದೆ.