ಎಂಎಲ್ಸಿ ಅರಳಿಗೂ ಕೋವಿಡ್ ಸೋಂಕು

ಬೀದರ:ಏ.16: ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅವರಿಗೆ ಕೋವಿಡ್ ಸೋಂಕು ತಗುಲಿದೆ.

ಕೆಮ್ಮು ಕಾಣಿಸಿಕೊಂಡ ಕಾರಣ ಅವರ ಕೋವಿಡ್ ಪರೀಕ್ಷೆ ನಡೆಸಿದ್ದು, ವರದಿ ಪಾಸಿಟಿವ್ ಬಂದಿದೆ. ಸದ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಲ ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದವರು ವೈದ್ಯರ ಸಲಹೆ ಮೇರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಅರಳಿ ಮನವಿ ಮಾಡಿದ್ದಾರೆ.

ಎರಡು ದಿನಗಳ ಹಿಂದೆ ಮಾಜಿ ಶಾಸಕ ಅಶೋಕ ಖೇಣಿ ಅವರಿಗೂ ಸೋಂಕು ತಗುಲಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.