ಎಂಎಲ್ ಸಿ ಚುನಾವಣೆಯ ಬಿಜೆಪಿ ಕಚೇರಿ ಉದ್ಘಾಟನೆ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.21: ಈಶ್ಯಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿನ ಜಿಲ್ಲಾ ಬಿಜೆಪಿ ಚುನಾವಣಾ ಕಾರ್ಯಾಲಯವನ್ನು ವಿಧಾನ ಪರಿಷತ್  ಮುಖ್ಯ ಸಚೇತಕ ಎನ್. ರವಿಕುಮಾರ್  ಉದ್ಘಾಟನೆ ಮಾಡಿದರು.
ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿ ಅಮರನಾಥ್ ಪಾಟೀಲ್,  ಮಾಜಿ ಶಾಸಕ ಸೋಮಶೇಖರ ರೆಡ್ಡಿ, ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು, ಮುಖಂಡರಾದ ಡಾ.ಎಸ್.ಜೆ.ವಿ.ಮಹಿಪಾಲ್ ಮೊದಲಾದವರು ಉಪಸ್ಥಿತರಿದ್ದರು.