ಎಂಎಲ್ ಸಿ ಚುನಾವಣೆ ಪ್ರತಾಪ್ ರೆಡ್ಡಿ ನಾಮಪತ್ರ ಸಲ್ಲಿಕೆ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮೇ.15: ವಿಧಾನ ಪರಿಷತ್ ಈಶಾನ್ಯ ಪದವೀಧರ ಮತಕ್ಷೇತ್ರದ  ಸ್ವತಂತ್ರ  ಅಭ್ಯರ್ಥಿಯಾಗಿ ನಾರಾ ಪ್ರತಾಪ್ ರೆಡ್ಡಿ ಅವರು ನಿನ್ನೆ  ಗುಲ್ಬರ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ಅವರು ಆಮ್ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮತ್ತು ಅಪಾರ ಸಂಖ್ಯೆಯ ಬೆಂಬಲಿಗರು ಮತ್ತು ಅಭಿಮಾನಿಗಳೊಂದಿಗೆ ಗುಲ್ಬರ್ಗ ನಗರದ ಜಗತ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ  ಮೆರವಣಿಗೆ ಮೂಲಕ ಆಗಮಿಸಿದರು.
ಕಳೆದ 2018 ರಲ್ಲಿ ನಡೆದ ಈ ಚುನಾವಣೆಯಲ್ಲಿ ಇವರು ಜೆಡಿಎಸ್ ಅಭ್ಯರ್ಥಿಯಾಗಿ ಮೊದಲ ಪ್ರಾಶಸ್ತ್ಯದ ಮತಗಳನ್ನು ಹೆಚ್ಚಾಗಿ ಪಡೆದರೂ, ದ್ವಿತೀಯ ಪ್ರಾಶಸ್ತ್ಯ ಮತಗಳ ಎಣಿಕೆಯಲ್ಲಿ ಸೋಲು ಅನುಭವಿಸಿದರು.
ಈಗ ಸಿಪಿಎಂ, ಆಮ್ ಆದ್ಮಿ ಪಕ್ಷ, ಅನೇಕ ಸಂಘಟನೆಗಳ ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.