ಎಂಎಲ್ ಸಿ ಸ್ಥಾನ, ಬಿಜೆಪಿಗೆ ರಾಜೀನಾಮೆ: ಕೈ ಹಿಡಿದ ಪುಟ್ಟಣ್ಣ

ಬೆಂಗಳೂರು,ಮಾ.9- ವಿಧಾನ ಪರಿಷತ್ ಸದಸ್ಯ ಸ್ಥಾನ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ಬಕ್ಕೆ ಪುಟ್ಟಣ್ಣ ರಾಜೀನಾಮೆ ಸಲ್ಲಿಸಿದ್ದಾರೆ.

ಬಳಿಕೆ ಕೆಪಿಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿದಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಇನ್ಮಿತರೆ ಹಿರಿಯ ನಾಯಕರ ಸಮ್ಮುಖದಲ್ಲಿ‌‌ ಕಾಂಗ್ರೆಸ್ ಸೇರ್ಪಡೆಯಾದರು.

ಬಳಿಕ ಮಾತನಾಡಿದ ಅವರು ಯಾವ ಉದ್ದೇಶದಿಂದ ಬಿಜೆಪಿ ಸೇರಿದೆನೋ ಅದನ್ನು ಮಾಡಲು ಸಾಧ್ಯವಾಗಲಿಲ್ಲ. ಅಲ್ಲಿ ಸತ್ತಂತೆ ಬದುಕುವ ಪರಿಸ್ಥಿತಿ ಇದೆ. ಮುಂದಿನ ದಿನಗಳಲ್ಲಿ ಎಲ್ಲವನ್ನು ವಿವರವಾಗಿ ಹೇಳುತ್ತೇನೆ ಎಂದಿದ್ದಾರೆ.

20 ವರ್ಷಗಳ ರಾಜಕೀಯ ಅನುಭವದಲ್ಲಿ ಇಂತಹ ಭ್ರಷ್ಟಾಚಾರವನ್ನು ನೋಡಿಲ್ಲ. ಬಿಜೆಪಿ ಪಕ್ಷ ಸೇರಿ ತಪ್ಪು ಮಾಡಿದೆ ಎಂದು ನನ್ನ ಆತ್ಮಸಾಕ್ಷಿ ಕೇಳುತ್ತಿತ್ತು. ಶಿಕ್ಷಣ ಕ್ಷೇತ್ರದಲ್ಲಿ ನಾನು ಸೇವೆ ಮಾಡಿಕೊಂಡು ಬಂದಿದ್ದು, ಇಂದು ಪಕ್ಷದ ತತ್ವ ಸಿದ್ಧಾಂತವನ್ನು ನಂಬಿ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಅವರ ಸಮ್ಮುಖದಲ್ಲಿ ಪಕ್ಷ ಸೇರುತ್ತಿದ್ದೇನೆ ಎಂದರು

36 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಾಲ್ಕು ಬಾರಿ ಗೆಲವು ಸಾಧಿಸಿದ್ದೇನೆ. ರಾಜ್ಯದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಪರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕೆಲವು ಸಮಸ್ಯೆಗಳನ್ನು ಬಗೆಹರಿಸಿದ್ದು, ಮತ್ತೆ ಕೆಲವು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗಿಲ್ಲ ಎಂದರು.

ಬಿಜೆಪಿಯಲ್ಲಿ ಕೆಲಸ ಮಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ರಾಜೀನಾಮೆ ನೀಡಿದ್ದೇನೆ. ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೂ ಹಾಗೂ ಬಿಜೆಪಿ ನಾಯಕರಿಗೆ ಮಾಹಿತಿ ನೀಡಿದ್ದೇನೆ. ಶಿಕ್ಷಕರ ಕ್ಷೇತ್ರದ ಯಾವುದೇ ಸಮಸ್ಯೆಯನ್ನು ಸರ್ಕಾರ ಬಗೆಹರಿಸಿಲ್ಲ. ಇತ್ತೀಚೆಗೆ ನಡೆದ ಅಧಿವೇಶನದ ಚರ್ಚೆಯಲ್ಲಿ ಭಾಗವಹಿಸಿದಾಗ, ನಾವು ಯಾವ ಮುಖ ಇಟ್ಟುಕೊಂಡು ಶಿಕ್ಷಕರು ಹಾಗೂ ಪಧವೀದರರ ಮತ ಕೇಳಲಿ ಎಂದು ಪ್ರಶ್ನೆ ಮಾಡಿದ್ದೆ ಎಂದರು.

ಸ್ವಾತಂತ್ರ್ಯ ಉದ್ಯಾನವನದಲ್ಲಿ 142 ದಿನ ಧರಣಿ ಮಾಡಿದ್ದು, ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರ ಸಮಸ್ಯೆಗೆ ಸ್ಪಂದಿಸಲು ಹಲವು ಬಾರಿ ಭೇಟಿ ಮಾಡಿದರೂ ಈ ಸಮಸ್ಯೆ ಬಗೆಹರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಾನು ಈ ತೀರ್ಮಾನ ಮಾಡಿದೆ ಆದರೂ ಸಮಸ್ಯೆ ಬಗೆ ಹರಿಸಲು ಸಾದ್ಯವಾಗಲಿಲ್ಲ ಎಂದಿದ್ದಾರೆ.

ಅಂದು ಮಧ್ಯರಾತ್ರಿ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮನವೊಲಿಸಿ ಎಂದು ಮನವಿ ಮಾಡಿದೆ. ನಂತರ ಅವರು ಮನವಿಗೆ ಸ್ಪಂದಿಸಿ ಪ್ರತಿಭಟನಾ ನಿರತರ ಮನವೊಲಿಸಿದರು.

ಮುಂದಿನ ದಿನಗಳಲ್ಲಿ ಪಕ್ಷ ನನಗೆ ಯಾವುದೇ ಜವಾಬ್ದಾರಿ ಕೊಟ್ಟರು ನಿಭಾಯಿಸುತ್ತೇನೆ. ನನ್ನನ್ನು ಯಾವ ರೀತಿ ಬಳಸಿಕೊಳ್ಳಬೇಕು ಎಂದು ಪಕ್ಷ ತೀರ್ಮಾನಿಸುತ್ತದೆ ಎಂದು ಹೇಳಿದರು.