ಎಂಎಸ್‍ಪಿಸಿ ಕೇಂದ್ರಕ್ಕೆ ಜಿಲ್ಲಾಧಿಕಾರಿ, ಸಿಇಓ ಆಕಸ್ಮಿಕ ಭೇಟಿ: ಪರಿಶೀಲನೆ

ಬೀದರ:ನ.23: ಬೀದರ್ ಮಹಿಳಾ ಪೂರಕ ಪೌಷ್ಠಿಕ ಆಹಾರ ಉತ್ಪಾದನಾ ಮತ್ತು ತರಬೇತಿ ಕೇಂದ್ರ (ಎಂಸ್‍ಪಿಸಿ)ಕ್ಕೆ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಹೀರಾ ನಸೀಮ್ ಅವರು ನವೆಂಬರ್ 20ರಂದು ಆಕಸ್ಮಿಕ ಭೇಟಿ ನೀಡಿದರು.

ಭೇಟಿ ಸಂದರ್ಭದಲ್ಲಿ ಅಲ್ಲಿರುವ ಎಲ್ಲಾ ಆಹಾರ ಪದಾರ್ಥಗಳ ಗುಣಮಟ್ಟವನ್ನು ಒಂದೊಂದಾಗಿ ಪರಿಶೀಲಿಸಿದರು. ಆಹಾರ ಪದಾರ್ಥಗಳಾದ ಬೆಲ್ಲ, ಹೆಸರುಕಾಳು, ಹೆಸರುಬೇಳೆ, ತೊಗರಿ ಬೇಳೆ, ಸಕ್ಕರೆ, ಅಕ್ಕಿ ಮೊದಲಾದ ಎಲ್ಲಾ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿದರು.

ಎಂಎಸ್ಪಿಸಿ ಕೇಂದ್ರದ ಹೊರ ಆವರಣ ಹಾಗೂ ಒಳಾವರಣವನ್ನು ಸ್ವಚ್ಛವಾಗಿಟ್ಟುಕೊಂಡು ಆಹಾರ ಪದಾರ್ಥಗಳನ್ನು ಸ್ವಚ್ಛ ಪಡಿಸಿಕೊಂಡು ಅಂಗನವಾಡಿ ಕೇಂದ್ರಗಳಿಗೆ ನಿಗದಿತ ಸಮಯದಲ್ಲಿ ಸರಬರಾಜು ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಎಂಎಸ್ಪಿಸಿಯಲ್ಲಿರುವ ಆಹಾರ ಪದಾರ್ಥಗಳನ್ನು ಉತ್ಪಾದಿಸುವ ಮಷಿನ್ಗಳನ್ನು ಕೂಡ ಜಿಲ್ಲಾಧಿಕಾರಿಗಳು ಮತ್ತು ಸಿಇಓ ಅವರು ಇದೆ ವೇಳೆ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರವೀಂದ್ರ ರತ್ನಾಕರ ಹಾಗೂ ಇತರರು ಇದ್ದರು.