ಎಂಟು ಕೃತಿಗಳ ಲೋಕಾರ್ಪಣೆ

ಕಲಬುರಗಿ,ಫೆ.26-ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಅಡಿಯಲ್ಲಿ ನಡೆಯುತ್ತಿರುವ ಕನ್ನಡ ನಾಡು ಪ್ರಕಾಶನದ 2022ರ ಎಂಟು ಕೃತಿಗಳ ಕೋಕಾರ್ಪಣೆ ಮತ್ತು 2021ರ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿಂದು ಜರುಗಿತು.
ಹಾವೇರಿ ಜಿಲ್ಲೆಯ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ.ಎಂ.ಭಾಸ್ಕರ್ ಕೃತಿ ಲೋಕಾರ್ಪಣೆ ಮಾಡಿದರು. ರಾಜ್ಯ ಗ್ರಂಥಾಲಯ ಇಲಾಖೆಯ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಡಾ.ಸುರೇಶ ಜಂಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಸಂಘದ ಅಧ್ಯಕ್ಷ ಅಪ್ಪಾರಾವ ಅಕ್ಕೋಣೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಡಾ.ಸ್ವಾಮಿರಾವ ಕುಲಕರ್ಣಿ, ಆಡಳಿತ ಮಂಡಳಿ ಸದಸ್ಯರಾದ ಪ್ರೊ.ವಿಜಯಕುಮಾರ ಪರೂತೆ, ಡಾ.ಶರಣಬಸಪ್ಪ ವಡ್ಡನಕೇರಿ, ಕಾಲೇನಿನ ಪ್ರಾಚಾರ್ಯ ರಾಜೇಂದ್ರ ಕೊಂಡಾ ವೇದಿಕೆ ಮೇಲಿದ್ದರು.
ಲೇಖಕರು, ಸಾಹಿತಿಗಳು, ಸಾಹಿತ್ಯಾಸಕ್ತರು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.