
ಕಲಬುರಗಿ:ಮೇ.25: ಅಫಜಲಪೂರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಎಂವೈ ಪಾಟೀಲವರನ್ನು ಸಂಪುಟ ದರ್ಜೆ ಸಚಿವರಾಗಿ ಮಾಡಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಜಿಲ್ಲಾ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಖನ್ನಾ ಅವರು ಒತ್ತಾಯಿಸಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಮತ್ತು ಪಕ್ಷದ ಹೈಕಮಾಂಡಗೆ ಮನವಿ ಮಾಡಿದ್ದಾರೆ.