ಎಂಸಿಎ ನೂತನ ಅಧ್ಯಕ್ಷರಾಗಿ ಎಂ.ಎಸ್. ಕರೀಗೌಡ್ರ ಅಧಿಕಾರ ಸ್ವೀಕಾರ

ಬೆಂಗಳೂರು.ಜು.೨೮: ಕರ್ನಾಟಕ ಸರ್ಕಾರದ ಏಕೈಕ ಜಾಹೀರಾತು ಸಂಸ್ಥೆಯಾದ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಎಂ.ಎಸ್. ಕರೀಗೌಡ್ರ   ಅಧಿಕಾರ ಸ್ವೀಕರಿಸಿದರು.ಎಂ.ಎಸ್. ಕರೀಗೌಡ್ರ ರವರು ಎಂಸಿಎ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ  ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ ಆರ್. ನಿರಾಣಿ ಹಾಗೂ  ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ್ ಶುಭ ಕೋರಿದರು.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸಿದ್ದಲಿಂಗಪ್ಪ ಬಿ. ಪೂಜಾರಿ ಶಾಲು ಮತ್ತು ಹೂಗುಚ್ಛ ನೀಡಿ ನೂತನ ಅಧ್ಯಕ್ಷರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ವೀರೇಶ್ ಸಂಗಳದ ಮತ್ತು ಎಚ್.ಆರ್. ತೀರ್ಥಲಿಂಗಪ್ಪ ರವರು ಉಪಸ್ಥಿತರಿದ್ದರು.ಸಂಸ್ಥೆಯಲ್ಲಿ ಏರ್ಪಡಿಸಿದ್ದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಎಂ.ಎಸ್. ಕರೀಗೌಡ್ರ ಮಾತನಾಡಿ, ಈ ಸಂಸ್ಥೆಯ ಅಧ್ಯಕ್ಷರಾಗಿ  ನೇಮಿಸಿದ  ಮುಖ್ಯಮಂತ್ರಿ ಬಸವರಾಜ್ ಎಸ್. ಬೊಮ್ಮಾಯಿಯವರಿಗೆ ಹಾಗೂ  ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ ಆರ್. ನಿರಾಣಿ ಯವರಿಗೆ ಹಾಗೂ ಅವರು ಈ ಮಟ್ಟಕ್ಕೆ ಬರಲು ಪೋಷಿಸಿ ಬೆಳೆಸಿದ ಸರ್ಕಾರದ ಸಚಿವರುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಅಲ್ಲದೇ ರಾಜ್ಯದ ಹಲವಾರು ಜಿಲ್ಲೆಗಳಿಂದ ಬಂದಂತಹ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ನಿರಂತರ ಚಿರಋಣಿಯಾಗಿರುತ್ತೇನೆ ಎಂದು ಕೃತಜ್ಞತೆ ಸಲ್ಲಿಸಿದರು.