ಎಂ.ಎಂ.ಹೋಬಳಿಯ ಕಲಾವಿದರಿಗೆ ಪ್ರಶಸ್ತಿ ನೀಡಿ

ಮರಿಯಮ್ಮನಹಳ್ಳಿ, ಮಾ.24: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ದಶಮಾನೋತ್ಸವದ ಅಂಗವಾಗಿ ಸಂಗೀತ ಮತ್ತು ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮರಿಯಮ್ಮನಹಳ್ಳಿ ಹೋಬಳಿಯ ಮೂವರು ಕಲಾವಿದರಿಗೆ ಸೇವಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ದಶಮಾನೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಶ್ರೀಮತಿ ಯಶೋಧರಮ್ಮ ದಾಸಪ್ಪ ಪ್ರಶಸ್ತಿ, ಸೇವಾ ಭೂಷಣ ಪ್ರಶಸ್ತಿ ಪ್ರದಾನ, ಹಾಗೂ ಮೈಸೂರು ರಾಜ್ಯದಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿಯ 101ರ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮರಿಯಮ್ಮನಹಳ್ಳಿಗೆ ಸಮೀಪದ ಡಣನಾಯಕನಕೆರೆ ಗ್ರಾಮದ ಸಂತೋಷ ಕಿರಣ್‍ರವರಿಗೆ ಸಂಗೀತ ವಿಭಾಗದಲ್ಲಿ ಮತ್ತು ದಾದಪೀರ್ ಅಡ್ಡಿಗೇರಿಯವರಿಗೆ ಕಲಾ ವಿಭಾಗದಲ್ಲಿ ಹಾಗೂ ತಬಲ ವಾದಕರ ವಿಭಾಗದಲ್ಲಿ ಗೊಲ್ಲರಹಳ್ಳಿಯ ಜಿ.ಕೆ ಮೌನೇಶ್‍ರವರಿಗೆ ಸೇವಾಭೂಷಣ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಿಲಾಯಿತು.
ಕಾರ್ಯಕ್ರಮದಲ್ಲಿ ಮೈಸೂರಿನ ರಂಗ ನಿರ್ದೇಶಕ ದಿನೇಶ್ ಚಮ್ಮಾಳಿಗೆ, ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಅಧ್ಯಕ್ಷೆ ಹೆಚ್.ಎಲ್. ಯಮುನಾ ಹಾಗೂ ಇತರರು ಇದ್ದರು.
ಫೋಟೋ:
24 ಮಮಹಳ್ಳಿ 02: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ದಶಮಾನೋತ್ಸವದ ಅಂಗವಾಗಿ ಸಂಗೀತ ಮತ್ತು ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮರಿಯಮ್ಮನಹಳ್ಳಿ ಹೋಬಳಿಯ ಮೂವರು ಕಲಾವಿದರಿಗೆ ಸೇವಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.